ಜಗದೀಶ್ ಶೆಟ್ಟರ್ 
ರಾಜಕೀಯ

ಮೋದಿ ಜನಪ್ರಿಯತೆಯಿಂದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ: ಜಗದೀಶ್ ಶೆಟ್ಟರ್

ಎಂಟು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚಾಗುತ್ತಲೇ ಇದ್ದು, ಅವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹೋರಾಟ ನಡೆಸಲಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ಮೋದಿ ನಾಯಕತ್ವ ಸಹಕಾರಿಯಾಗಲಿದೆ...

ಹುಬ್ಬಳ್ಳಿ: ಎಂಟು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚಾಗುತ್ತಲೇ ಇದ್ದು, ಅವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹೋರಾಟ ನಡೆಸಲಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ಮೋದಿ ನಾಯಕತ್ವ ಸಹಕಾರಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ನಾಯಕತ್ವವನ್ನು ಬಿಜೆಪಿಯ ಕೇಂದ್ರ ನಾಯಕತ್ವ ನಿರ್ಧರಿಸಲಿದೆ. ಸಾಮಾನ್ಯ ಜನರ ಬಗೆಗಿನ ಕಾಳಜಿ ಮತ್ತು ಅವರು ನೀಡಿದ ಉತ್ತಮ ಆಡಳಿತದಿಂದಾಗಿ ಪ್ರಧಾನಿ ಮೋದಿಯವರ ಜನಪ್ರಿಯತೆ ನಿರಂತರವಾಗಿ ಹೆಚ್ಚುತ್ತಿದೆ. ರಾಷ್ಟ್ರದಾದ್ಯಂತ ಬಿಜೆಪಿ ಅಗಾಧವಾಗಿ ಬೆಳೆದಿದ್ದು, ಅದಕ್ಕೆ ಯಾವುದೇ ಪಕ್ಷ ಸರಿಸಾಟಿಯಾಗುವುದಿಲ್ಲ. ಮತ್ತೊಂದೆಡೆ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಪ್ರಸ್ತುತತೆ ಕಳೆದುಕೊಂಡು ನಾಯಕತ್ವದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಪಕ್ಷವು ಶೆಟ್ಟರ್ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಅವರು,  "ಕೆಲವು ದೋಷಗಳು ಕಂಡುಬಂದಾಗ, ಅವುಗಳನ್ನು ತಕ್ಷಣವೇ ಸರಿಪಡಿಸಲಾಗಿದೆ. ಇತ್ತೀಚಿನ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಪಕ್ಷದ ವ್ಯವಹಾರಗಳ ಬಗ್ಗೆ 15-20 ನಿಮಿಷಗಳ ಕಾಲ ಮಾತನಾಡಲು ನನಗೆ ಅವಕಾಶ ಮಾಡಿಕೊಟ್ಟರು. ಹಾಗಾಗಿ ಪಕ್ಷವು ಎಂದಿಗೂ ನನ್ನನ್ನು ದುರ್ಬಲಗೊಳಿಸಿಲ್ಲ ಎಂದು ತಿಳಿಸಿದರು.

ಚುನಾವಣೆಗೂ ಮುನ್ನ ಉಡುಗೊರೆಗಳನ್ನು ಹಂಚುವ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಗಳು ಮತ್ತು ಮುಖಂಡರು ಇದನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಾರೆ. ಇದರಿಂದ ಚುನಾವಣಾ ಫಲಿತಾಂಶದ ಮೇಲೂ ಪರಿಣಾಮ ಬೀರಬಹುದು ಎಂದಿದ್ದಾರೆ.

ಇದೇ ವೇಳೆ ಸಾರ್ವಜನಿಕರ ಒಳಿತಿಗಾಗಿ ಮತ್ತು ಕ್ಷೇಮಕ್ಕಾಗಿ ಕೆಲಸ ಮಾಡುವವರಿಗೆ ತಮ್ಮ ಹಕ್ಕು ಚಲಾಯಿಸುವಂತೆ ಮತದಾರರರಲ್ಲಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT