ರಾಜಕೀಯ

ಆಮ್ ಆದ್ಮಿ ಪಾರ್ಟಿ 60 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

Sumana Upadhyaya

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳ ಹಿಂದೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್‌ ಆದ್ಮಿ ಪಕ್ಷವು ಇಂದು ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಬೇರೆಲ್ಲ ಪಕ್ಷಗಳಿಗಿಂತ ಮೊದಲೇ ನಾವು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದೆವು. ನಂತರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದೆವು. ಈಗ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದೇವೆ. ಬೇರೆಲ್ಲ ಪಕ್ಷಗಳಿಗಿಂತ ನಾವು ಮುಂದಿದ್ದೇವೆ ಎಂಬುದನ್ನು ಇದು ಸೂಚಿಸುತ್ತದೆ. ಆಮ್‌ ಆದ್ಮಿ ಪಾರ್ಟಿಯು ಜನಸಾಮಾನ್ಯರಿಗೆ ಅವಕಾಶ ನೀಡುತ್ತಿದೆ" ಎಂದು ಪೃಥ್ವಿ ರೆಡ್ಡಿ ಹೇಳಿದರು.

ಉನ್ನತ ಶಿಕ್ಷಣ ಪಡೆದವರಿಗೆ ಆದ್ಯತೆ: ಆಪ್ ನ ಎರಡು ಪಟ್ಟಿಯಲ್ಲಿ ಒಟ್ಟು 14 ರೈತರಿಗೆ, 11 ಮಹಿಳೆಯರಿಗೆ, 18 ವಕೀಲರು, 6 ವೈದ್ಯರು, 23 ಇಂಜಿನಿಯರ್‌ಗಳು ಹಾಗೂ 4 ಐಟಿ ವೃತ್ತಿಪರರು ಹಾಗೂ ಐದು ಮಂದಿ ಡಾಕ್ಟರೇಟ್‌ ಪಡೆದವರು ಇದ್ದಾರೆ. 29 ಜನರ ಸ್ನಾತಕೋತ್ತರ ಪದವೀಧರರು, 68 ಪದವೀಧರರು, 6 ಎಂಬಿಎ ಪದವೀಧರರನ್ನು ಈ ಎರಡು ಪಟ್ಟಿಗಳು ಒಳಗೊಂಡಿವೆ ಎಂದು ಹೇಳಿದರು.

SCROLL FOR NEXT