ಜೆಡಿಎಸ್ ಸೇರಿದ ಮಲ್ಲಿಕಾರ್ಜುನ ಖೂಬಾ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ 2023: ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಸೇರ್ಪಡೆ!

ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಪಕ್ಷಾಂತರ ಪರ್ವ ಬಿರುಸಿನಿಂದ ಸಾಗಿದ್ದು, ಇದೀಗ ಈ ಪಟ್ಟಿಗೆ ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಪಕ್ಷಾಂತರ ಪರ್ವ ಬಿರುಸಿನಿಂದ ಸಾಗಿದ್ದು, ಇದೀಗ ಈ ಪಟ್ಟಿಗೆ ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಲ್ಲಿಕಾರ್ಜುನ ಖೂಬಾ ಅವರು ಶುಕ್ರವಾರ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಮರಳಿದರು.

ಈ ಹಿಂದೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸೇರಿದ್ದರು. 

ಇದೀಗ ಮತ್ತೆ ಜೆಡಿಎಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಮನೆಯಲ್ಲೇ ಶುಕ್ರವಾರ ಪಕ್ಷ ಸೇರಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರೆಂಟಿ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

BIDADI TOWNSHIP: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು

IPL 2027: ಮರಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್, ಲಕ್ನೋ ತಂಡಕ್ಕೆ ಕುಲದೀಪ್ ಯಾದವ್ ಸೇರುವ ಸಾಧ್ಯತೆ!

AI ಬಳಸಿ ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ, ವಿಡಿಯೋ ವೈರಲ್​ ಕೇಸ್; ಮೂವರು ಆರೋಪಿಗಳ ಬಂಧನ

ಸೈಬರ್ ವಂಚನೆ ತಡೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ಸಂತ್ರಸ್ತರಿಂದ ದೋಚಿದ್ದ 436 ಕೋಟಿ ರೂ freez!