ಅಮಿತ್ ಶಾ ರೋಡ್ ಶೋ 
ರಾಜಕೀಯ

ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ

ದಕ್ಷಿಣದ ಹೆಬ್ಬಾಗಿಲು ಎಂದೇ ಕರೆಯಲಾಗುವ ಕರ್ನಾಟಕದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಮತದಾರರ ಮನಗೆಲಲ್ಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ಶಿವಮೊಗ್ಗ: ರಾಜಕಾರಣದಲ್ಲಿ ಬಿಜೆಪಿಗೆ ದಕ್ಷಿಣದ ಹೆಬ್ಬಾಗಿಲು ಎಂದೇ ಕರೆಯಲಾಗುವ ಕರ್ನಾಟಕದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಪಕ್ಷ ರಣತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಮತದಾರರ ಮನಗೆಲಲ್ಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ರಾಜ್ಯದ ಎಲ್ಲಾ ದಿಕ್ಕಿನಲ್ಲಿಯೂ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರನ್ನು ಓಲೈಸಲು ಮುಂದಾಗಿದ್ದಾರೆ. ಅದರಲ್ಲೂ ಕೋಮು ಸೂಕ್ಷ್ಮ ಪ್ರದೇಶವಾದ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ಸೋಮವಾರ ಬೃಹತ್ ರೋಡ್ ಶೋ ನಡೆಸುತ್ತಿದ್ದು, ಜನಸಾಗರವೇ ಹರಿದುಬಂದಿದೆ. ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ತುಂಬಿರುವ ಜನರು, ಮೋದಿ, ಅಮಿತ್ ಶಾ, ಬಿಜೆಪಿ ಪರ ಜಯ ಘೋಷ ಮೊಳಗಿಸಿದರು.

ಶಿವಪ್ಪ ನಾಯಕ ಪುತ್ಹಳಿಗೆ ನಮನ ಸಲ್ಲಿಸಿ ರೋಡ್ ಶೋ ಆರಂಭಿಸಿದ ಅಮಿತ್ ಶಾ ಅವರಿಗೆ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ, ಪಕ್ಷದ ಅಭ್ಯರ್ಥಿಗಳಾದ ಚೆನ್ನಬಸಪ್ಪ, ಅಶೋಕ್ ನಾಯ್ಕ್ ಸಾಥ್ ನೀಡಿದರು. ಕಲಾತಂಡಗಳ ಆಕರ್ಷಕ ಪ್ರದರ್ಶನ ರೋಡ್ ಶೋ ಮೆರುಗು ಹೆಚ್ಚಿಸಿದೆ. 

ಇದಕ್ಕೂ ಮುನ್ನಾ ಹಾವೇರಿಯ ರಾಣೆಬೆನ್ನೂರು, ತುಮಕೂರಿನ ಗುಬ್ಬಿ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ರೋಡ್ ಶೋ ನಡೆಸುವ ಮೂಲಕ ಪ್ರಚಾರ ನಡೆಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Tsunami: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

Bus strike-ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್: ಗರಿಗೆದರಿದ ಸಂಪುಟ ಪುನಾರಚನೆ, ಡಿಸಿಎಂ ಡಿಕೆಶಿ ಏನೆಂದರು?

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಶೇ.50ರಷ್ಟು ಸಚಿವರನ್ನು ಸಿದ್ದು ಕೈಬಿಡುವ ಸಾಧ್ಯತೆ?

SCROLL FOR NEXT