ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ: ಕುಮಾರಸ್ವಾಮಿ

ಯಾವುದೇ ಕಾರಣಕ್ಕೂ ಬಿಜೆಪಿ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಬಾಗಲಕೋಟೆ: ಯಾವುದೇ ಕಾರಣಕ್ಕೂ ಬಿಜೆಪಿ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ. ಬಿಜೆಪಿಯೊಳಗೆ ಬ್ರಾಹ್ಮಣರನ್ನು ಸಿಎಂ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ ಎಂದು ಆರೋಪಿಸಿದರು.

ಪರಿವಾರ, ಎಟಿಎಂ ಎಂದು ಟೀಕಿಸುವ ಪ್ರಧಾನಿ ಮೋದಿ, ರಾಜ್ಯದಲ್ಲಿನ ಭ್ರಷ್ಟಾಚಾರದ ಬಗ್ಗೆ ಏಕೆ ಮಾತನಾಡುವುದಿಲ್ಲ. ಮೋದಿ ಕೇವಲ ಬುರುಡೆ ಭಾಷಣ ಮಾಡುತ್ತಾರೆ. ಇನ್ನು ಒಂದು ವಾರ ಮಾತ್ರ ಮೋದಿ ರಾಜ್ಯಕ್ಕೆ ಬರುತ್ತಾರೆ. ನಂತರ ಮತ್ತೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದರು.

ಪ್ರಧಾನಿ ಸೇರಿದಂತೆ ಕೇಂದ್ರದ ಹಲವು ನಾಯಕರು ಚುನಾವಣೆ ಬಳಿಕ ರಾಜ್ಯಕ್ಕೆ ಟಾಟಾ ಮಾಡಿ ಹೋಗುತ್ತಾರೆ. ಮುಂದೆ ಲೋಕಸಭಾ ಚುನಾವಣೆಗೆ ಬರುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಅಂತಾರೆ, ಲೂಟಿ ಹೊಡೆಯೋದೆ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿಯಾ? ಎಂದು ಪ್ರಶ್ನಿಸಿದ ಮಾಜಿ ಸಿಎಂ, ಮೋದಿ, ಜೆಡಿಎಸ್ ಕಾಂಗ್ರೆಸ್ ನ ಬಿ ಟೀಂ ಅಂತಾರೆ, ಸಿದ್ದರಾಮಯ್ಯ ನಮ್ಮನ್ನ ಬಿಜೆಪಿ ಬಿ ಟೀಂ ಅಂತಾರೆ, ನಾನು ಯಾರ ಬಿ ಟೀಂ ಅಲ್ಲ, ನಾನು ನಾಡಿನ ಜನರ ಬಿ ಟೀಂ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತಕ್ಕೆ UNSC ಸದಸ್ಯತ್ವಕ್ಕೆ ಬ್ರಿಟನ್ ಪ್ರಧಾನಿ Starmer ಬೆಂಬಲ; 2030 ರ ವೇಳೆಗೆ ಬ್ರಿಟನ್ ಜೊತೆಗಿನ ವ್ಯಾಪಾರ ದ್ವಿಗುಣ- Modi

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

'ನನ್ನ ಸ್ನೇಹಿತನೊಂದಿಗೆ ಮಾತನಾಡಿದೆ': ಟ್ರಂಪ್‌ಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದೇಕೆ?

ಭಾರತವೇ ನಮಗೆ ಮಾದರಿ, ಅಕ್ರಮ ವಲಸೆ ತಡೆಗೂ ಸಹಕಾರಿ; ಬ್ರಿಟನ್ ನಲ್ಲೂ ಆಧಾರ್ ಜಾರಿಗೆ PM Keir Starmer ಉತ್ಸುಕ; Nandan Nilekani ಜೊತೆ ಸಭೆ!

Ranthambore: 'ಇದು ನನ್ನದು, ಇಲ್ಲ ನನ್ನದು'; ದಟ್ಟ ಅರಣ್ಯದಲ್ಲಿ ಅಮ್ಮ-ಮಗಳ ಬಿಗ್ ಫೈಟ್! ದಂಗಾದ ಪ್ರವಾಸಿಗರು, ಅಪರೂಪದ Video

SCROLL FOR NEXT