ಅಮಿತ್ ಶಾ 
ರಾಜಕೀಯ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ, ದಲಿತರಿಗೆ ನೀಡಲಾದ ಮೀಸಲಾತಿಯನ್ನು ಹಿಂಪಡೆಯುತ್ತದೆ: ಅಮಿತ್ ಶಾ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೈಸೂರು: ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೈಸೂರಿನ ವರುಣಾ ಕ್ಷೇತ್ರದಲ್ಲಿಂದು ವಿ ಸೋಮಣ್ಣ ಪರ ಮತ ಯಾಚನೆ ಮಾಡಿದ ಅವರು, ಸಿದ್ದರಾಮಯ್ಯ ಅವರು ಲಿಂಗಾಯತರಿಗೆ ಅಪಮಾನ ಮಾಡಿದ್ದಾರೆ. ಆದರೆ ಬಿಜೆಪಿ ಬಿಎಸ್​ ಯಡಿಯೂರಪ್ಪ ಮತ್ತು ಬಸವರಾಜ​ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಿದೆ. ಸಿದ್ದರಾಮಯ್ಯ ಅವರು ಲಿಂಗಾಯತರು ಭ್ರಷ್ಟಾಚಾರಿಗಳು ಎನ್ನುವ ಮೂಲಕ ಲಿಂಗಾಯತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್​ನವರು ಈ ಹಿಂದೆ ನಿಜಲಿಂಗಪ್ಪ ಮತ್ತು ವಿರೇಂದ್ರ ಪಾಟೀಲ್​​ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿ ಅಪಮಾನ ಮಾಡಿತು ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರೆ ನೀವು ಯಾಕೆ ಪದೇ ಪದೇ ಕ್ಷೇತ್ರ ಬದಲಾಯಿಸುತ್ತೀರಿ. ವರುಣಾ ಮತದಾರರೇ ನಿವೃತ್ತಿ ಹೊಂದುವ ನಾಯಕ ಬೇಕಾ ಅಥವಾ ಭವಿಷ್ಯದ ಬಗ್ಗೆ ಯೋಜಿಸುವ ನಾಯಕ ಬೇಕಾ. ಸಿದ್ದರಾಮಯ್ಯ ಅವರ ಕಾಲದಲ್ಲಿ ಮಂಡ್ಯದ ಮೈ ಶುಗರ್​ ಕಾರ್ಖಾನೆ ಮುಚ್ಚಿತು ಎಂದು ಮತದಾರರಿಗೆ ನೆನಪಿಸುವ ಪ್ರಯತ್ನ ಮಾಡಿದರು. 

ಕಾಂಗ್ರೆಸ್​ ಮುಕ್ತ ಕರ್ನಾಟಕ ನಿರ್ಮಿಸಿ: ಕರ್ನಾಟಕವನ್ನು ಅಭಿವೃದ್ದಿ ಮತ್ತು ಸುರಕ್ಷಿತ ರಾಜ್ಯ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೇ ಪಿಎಫ್​ಐ ನಿಷೇಧವನ್ನು ಹಿಂಡೆಯುತ್ತಾರೆ. ಕಾಂಗ್ರೆಸ್​ ರಾಜ್ಯವನ್ನು ಎಟಿಎಂ ಮಾಡಲು ಹೊರಟಿದೆ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ.

ಕಾಂಗ್ರೆಸ್​ ಮುಕ್ತ ಕರ್ನಾಟಕ ಮಾಡಿ. ವರುಣಾ ಜನರು ಸಿದ್ದರಾಮಯ್ಯಗೆ ಮತ ನೀಡಬೇಡಿ. ವಿ ಸೋಮಣ್ಣ ಅವರನ್ನು ಗೆಲ್ಲಿಸಿದರೆ, ವರುಣಾವನ್ನು ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ಕಮಲದ ಬಟನ್​ ಮೇಲೆ ಒತ್ತಿ. ನರೇಂದ್ರ ಮೋದಿಯವರನ್ನು 2024ರಲ್ಲಿ ಮತ್ತೊಮ್ಮೆ ಪ್ರಧಾನಿ ಮಾಡಿ ಎಂದು ಕ್ಷೇತ್ರದ ಜನತೆಗೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT