ಪ್ರಧಾನಿ ನರೇಂದ್ರ ಮೋದಿ 
ರಾಜಕೀಯ

ಕಾಂಗ್ರೆಸ್‌ನವರಿಗೆ ಈಗ ಹನುಮಂತನ ಕಂಡರೂ ಆಗುತ್ತಿಲ್ಲ, ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ: ಪ್ರಧಾನಿ ಮೋದಿ ಟೀಕೆ

ಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತು. ಇದೀಗ ಹನುಮನ ಜನ್ಮಸ್ಥಳದಲ್ಲಿ ಭಜರಂಗಬಲಿಯನ್ನು ಬಂಧಿಸಿಡಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಟೀಕಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಂದು ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿತ್ತು. 

ವಿಜಯನಗರ: ಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತು. ಇದೀಗ ಹನುಮನ ಜನ್ಮಸ್ಥಳದಲ್ಲಿ ಭಜರಂಗಬಲಿಯನ್ನು ಬಂಧಿಸಿಡಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಟೀಕಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಂದು ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿತ್ತು. 

ವಿಜಯನಗರದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಹನುಮಂತನ ಜನ್ಮಸ್ಥಾನಕ್ಕೆ ನಾನು ಬಂದಿದ್ದೇನೆ. ನಾನು ಹನುಮಂತನಿಗೆ ಶತ ಪ್ರಣಾಮ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗಬಲಿ ಅಂದರೆ ಹನುಮಂತನನ್ನು ಬೀಗ ಹಾಕಿ ಬಂಧಿಸಲು ಹೊರಟಿದ್ದಾರೆ. ಕಾಂಗ್ರೆಸ್‌ನವರಿಗೆ ಹಿಂದೆ ಶ್ರೀರಾಮನನ್ನು ಕಂಡರೂ ಆಗುತ್ತಿರಲಿಲ್ಲ. ಈಗ ಹನುಮಂತನ ಕಂಡರೂ ಆಗುತ್ತಿಲ್ಲ. ನಮಗೆ ಶ್ರೀರಾಮಚಂದ್ರ ಹಾಗೂ ಹನುಮಂತ ಪೂಜ್ಯರು. ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ ಎಂದು ಟೀಕಿಸಿದರು.

ದೇಶದಲ್ಲಿ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಈ ಸಂಕಲ್ಪಕ್ಕೆ ಹನುಮಂತನ ಆಶೀರ್ವಾದ ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ ಎಂದರು. ಕಾಂಗ್ರೆಸ್ ಮೊದಲಿನಿಂದಲೂ ಆಂತಕವಾದಿಗಳ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಭಯೋತ್ಪಾದಕರು ಸತ್ತಾಗ ಅಳುತ್ತಾರೆ. ಸರ್ಜಿಕಲ್ ಸ್ಟೈಕ್ ನಡೆದಾಗ ಭಾರತೀಯ ಸೇನೆಯ ಸಾಮರ್ಥ್ಯದ ಕುರಿತು ಪ್ರಶ್ನೆ ಮಾಡುತ್ತಾರೆ. ಕರ್ನಾಟಕದಲ್ಲಿ ಉಗ್ರ ಕೃತ್ಯ ನಡೆದಾಗ ಕಾಂಗ್ರೆಸ್ ಅವರ ಪರ ನಿಂತಿದೆ. ಆತಂಕವಾದಿಗಳು, ಉಗ್ರವಾದಿಗಳು ಜಾಗೃತವಾಗಿರುವ ಕಡೆ ಅವರನ್ನು ಶಮನಗೊಳಿಸುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

ಭಾರತ ಅಭಿವೃದ್ದಿಯಾಗಬೇಕಾದರೇ ನಿಮ್ಮ ಒಂದು ಮತ ಬಹಳ ಅಮುಲ್ಯವಾಗಿದೆ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರೆಂಟಿಗಳ ಕಂತೆ ​ ಹಿಡಿದುಕೊಂಡು ಕುಂತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರೆಂಟಿಗಳನ್ನ ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಟೀಕಿಸಿದರು.

ಪಿಎಂ ಕಿಸಾನ್​ ಯೋಜನೆಯಿಂದ 11 ಕೋಟಿ ರೈತರಿಗೆ ಲಾಭವಾಗಿದೆ. ಕಳೆದ ವರ್ಷದಲ್ಲಿ ಇಲ್ಲಿಯವರೆಗೆ ನಾವು ಎರಡುವರೆ ಲಕ್ಷ ಕೋಟಿ ರೂಪಾಯಿ ಹಣ ನೀಡಿದ್ದೇವೆ. ಕರ್ನಾಟಕದಲ್ಲಿ 18 ಸಾವಿರ ಕೋಟಿ ಹಣವನ್ನು ಈ ನಿಧಿ ಮೂಲಕ ನೀಡಿದ್ದೇವೆ. ರಾಜ್ಯದಲ್ಲಿ ಬಡವರಿರಲಿ, ಅಥವಾ ರೈತರಾಗಲಿ ಮತ್ತು ಸಮಾಜದ ಎಲ್ಲ ವರ್ಗದ ಜನರಿಗೆ ನಾವು ಲಾಭವನ್ನು ತಲುಪಿಸಿದ್ದೇವೆ. ಆದ್ದರಿಂದ ಈ ಎಲ್ಲ ವರ್ಗದ ಜನರ ಆಸೆ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT