ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ
Sumana Upadhyaya
Updated On : 2 May 2023, 5:05 pm

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ "ನಿರ್ಣಾಯಕ ಕ್ರಮ" ತೆಗೆದುಕೊಳ್ಳುತ್ತದೆ ಎಂದು ಪಕ್ಷ ಹೇಳಿದೆ.

Advertisement

Advertisement

ಅಂತಹ ಯಾವುದೇ ಸಂಘಟನೆಗಳ ಮೇಲೆ ನಿಷೇಧ ಹೇರುವುದು ಸೇರಿದಂತೆ ಕಾನೂನು ಪ್ರಕಾರ ನಾವು ನಿರ್ಣಾಯಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ ತಿಳಿಸಿದರು.

"ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ ಮತ್ತು ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ಶತ್ರುತ್ವ ಅಥವಾ ದ್ವೇಷವನ್ನು ಉತ್ತೇಜಿಸುವ ಬಜರಂಗದಳ, ಪಿಎಫ್‌ಐ ಅಥವಾ ಇತರರಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳು ಅದನ್ನು ಉಲ್ಲಂಘಿಸುವುದಿಲ್ಲ ಎಂದು ನಾವು ನಂಬುತ್ತೇವೆ" ಎಂದು ಕಾಂಗ್ರೆಸ್ ಹೇಳಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.

'ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ' ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ ಎಂದು ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು:

ಸಾಂಪ್ರದಾಯಿಕ ಟಚ್: ವೀಳ್ಯದೆಲೆ ಅಡಿಕೆ, ಅರಿಶಿನ, ಕುಂಕುಮ ಇಟ್ಟು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆ ಪುಸ್ತಕಕ್ಕೆ ಕನ್ನಡದ ಬಾವುಟದ ಬಣ್ಣ ಹಚ್ಚಲಾಗಿದೆ.

ಇದನ್ನೂ ಓದಿ: '5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್': ಬಿಜೆಪಿ ಪ್ರಣಾಳಿಕೆ ಬಿಡುಗಡೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments