ಅಮಿತ್ ಶಾ, ನಡ್ಡಾ, ಯೋಗಿ ಸಾಂದರ್ಭಿಕ ಚಿತ್ರ 
ರಾಜಕೀಯ

ದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ. 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ. 

ರಾಜ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದ್ವೇಷಪೂರಿತ ಭಾಷಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇಂತಹ ಹೇಳಿಕೆಗಳ ಕುರಿತು ಸುಪ್ರೀಂಕೋರ್ಟ್ ನಿರ್ದೇಶನಗುಣವಾಗಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಅಜಯ್ ಮಾಕನ್, ವಿವೇಕ್ ಟಂಕಾ, ಸಲ್ಮಾನ್ ಖುರ್ಷಿದ್ ಮತ್ತು ಪವನ್ ಖೇರಾ ಅವರನ್ನೊಳಗೊಂಡ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಇಂತಹ "ದ್ವೇಷಪೂರಿತ ಭಾಷಣಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರ ನೀಡಿತು.

ದ್ವೇಷಕಾರಿ ಭಾಷಣಗಳ ಕುರಿತು ಸುಪ್ರೀಂ ಕೋರ್ಟ್ ಆದೇಶದ ಪ್ರತಿಗಳನ್ನು ಕಾಂಗ್ರೆಸ್  ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ದೇಶದ ಕಾನೂನು ಮತ್ತು ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಟಂಕಾ ಹೇಳಿದರು. 

ರಾಜ್ಯದಲ್ಲಿ 'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ನಡೆಯುತ್ತವೆ' ಎಂದು ಬಿಜೆಪಿಯ ಮೂವರು ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT