ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ(ಸಾಂದರ್ಭಿಕ ಚಿತ್ರ) 
ರಾಜಕೀಯ

ಕರುನಾಡಿಗೆ ಇಂದು ಮತ್ತೊಮ್ಮೆ ಪ್ರಧಾನಿ ಮೋದಿ ಎಂಟ್ರಿ: ಮೂರು ರೋಡ್ ಶೋ, ಚುನಾವಣಾ ಪ್ರಚಾರದಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿಯವರ ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರ, ರೋಡ್ ಶೋಗೆ ಇಂದು ಕರುನಾಡು ಸಾಕ್ಷಿಯಾಗಲಿದೆ. ಮೊನ್ನೆ ಏಪ್ರಿಲ್ 29 ಮತ್ತು 30ರಂದು ಪ್ರಚಾರ ನಡೆಸಿದ್ದ ಮೋದಿಯವರು ಇಂದು ಮತ್ತೊಮ್ಮೆ ಕನ್ನಡಿಗರ ಮನ ಗೆಲ್ಲಲು ಬರುತ್ತಿದ್ದಾರೆ.

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿಯವರ ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರ, ರೋಡ್ ಶೋಗೆ ಇಂದು ಕರುನಾಡು ಸಾಕ್ಷಿಯಾಗಲಿದೆ. ಮೊನ್ನೆ ಏಪ್ರಿಲ್ 29 ಮತ್ತು 30ರಂದು ಪ್ರಚಾರ ನಡೆಸಿದ್ದ ಮೋದಿಯವರು ಇಂದು ಮತ್ತೊಮ್ಮೆ ಕನ್ನಡಿಗರ ಮನ ಗೆಲ್ಲಲು ಬರುತ್ತಿದ್ದಾರೆ.

ಇಂದು ಬೆಳಗ್ಗೆ 10.25ಕ್ಕೆ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಲಿದ್ದು ಬೆಳಗ್ಗೆ 11 ಗಂಟೆಗೆ ಚಳ್ಳಕೆರೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 2.45ಕ್ಕೆ ಸಿಂಧನೂರು ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಕಲಬುರಗಿಯಲ್ಲಿ ರೋಡ್​ಶೋ ನಡೆಸಲಿದ್ದಾರೆ. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಾಗಿರುವ ಕಲಬುರಗಿಯಲ್ಲಿ ಸುಮಾರು 45 ನಿಮಿಷ ರೋಡ್​ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಇಂದು ರಾತ್ರಿ ಕಲಬುರಗಿಯಲ್ಲೇ ಪ್ರಧಾನ ಮಂತ್ರಿಗಳು ತಂಗಲಿದ್ದಾರೆ.

ಪ್ರಧಾನಿ ಮೋದಿ ರೋಡ್​ ಶೋ ಹಿನ್ನೆಲೆ ಕಲಬುರಗಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಡಿಸಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ. ನಾಳೆ ಮಧ್ಯಾಹ್ನ 12ರವರೆಗೆ ಡ್ರೋನ್ ಕ್ಯಾಮರಾ ಹಾರಾಟ ನಿಷೇಧ ಹೇರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

Cricket Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ Arjun Tendulkar, ಯಾರು ಸಾನಿಯಾ ಚಂದೋಕ್? video

SCROLL FOR NEXT