ಕಲಬುರಗಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ 
ರಾಜಕೀಯ

ಖರ್ಗೆ ತವರಿನಲ್ಲಿ ಮೋದಿ ಭರ್ಜರಿ ರೋಡ್ ಶೋ, ಜನರಿಂದ ಅದ್ದೂರಿ ಸ್ವಾಗತ- ವಿಡಿಯೋ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಪ್ರಧಾನಿ  ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮಿಂಚಿನ ಸಂಚಲನ ನೃಷ್ಟಿಸಿದರು. 

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಪ್ರಧಾನಿ  ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮಿಂಚಿನ ಸಂಚಲನ ನೃಷ್ಟಿಸಿದರು. 

ಹುಮನಾಬಾದ ರಸ್ತೆಯಲ್ಲಿರುವ ಕೆಎಂಎಫ್ ಡೈರಿ ಸರ್ಕಲ್​ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ ಸುಮಾರು 5 ಕಿಮೀಗಳಷ್ಟು ದೂರ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ನೆಚ್ಚಿನ ಪ್ರಧಾನಿಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಜನರು ಸೇರಿದ್ದರು.

ರಸ್ತೆಯುದ್ದಕ್ಕೂ ನೆರದಿದ್ದ ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು  ಹೂಮಳೆಗರೆದು, ಜಯಘೋಷ ಮೊಳಗಿಸಿದರು. ಎಂದು ಘೋಷಣೆ ಕೂಗಿದರು. ಪುಟ್ಟ ಮಕ್ಕಳು ರಾಮ, ಲಕ್ಷ್ಮಣ, ಒನಕೆ ಓಬವ್ವ ವೇಷ ಧರಿಸಿ ಬರುವ ಮೂಲಕ ರೋಡ್​ ಶೋ ವೇಳೆ ಗಮನ ಸೆಳೆದಿದ್ದಾರೆ. 

ಪ್ರಧಾನಿ ಮೋದಿ ರೋಡ್​ ಶೋ ಹಿನ್ನೆಲೆಯಲ್ಲಿ ಇಡೀ ನಗರ ಸಂಪೂರ್ಣ ಕೇಸರಿಮಯವಾಗಿತ್ತು. ಮೋದಿ ರೋಡ್​ ಶೋಗೆ ಪೊಲೀಸ್ ಹಾಗೂ ಸೇನಾ ಪಡೆಗಳಿಂದ ಸರ್ಪಗಾವಲು ಹಾಕಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ