ಪ್ರಿಯಾಂಕಾ ಗಾಂಧಿ ರೋಡ್ ಶೋ 
ರಾಜಕೀಯ

ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ: ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು.

ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು, ಘೋಷಣೆ ಕೂಗುತ್ತಾ ತೆರೆದ ವಾಹನದ ಜೊತೆಗೆ ಸಾಗಿದರು. ಕೈ ಬೀಸುತ್ತಾ ರೋಡ್ ಶೋ ನಲ್ಲಿ ತೆರಳಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ದಿನನಿತ್ಯ ನಿಮ್ಮನ್ನು ದರೋಡೆ ಮಾಡಲಾಗುತ್ತಿದೆ. 40% ಕಮಿಷನ್ ಸರಕಾರದಿಂದ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ,  ಉದ್ಯೋಗಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೇ, ದೇಶದ ಪ್ರಧಾನಿಗಳು - ಗೃಹ ಸಚಿವರು ಕರ್ನಾಟಕಕ್ಕೆ ಏನು ಮಾಡಿದ್ದೇವೆಂದು ಏಕೆ ಹೇಳುತ್ತಿಲ್ಲ? ಎಂದು ಪ್ರಶ್ನಿಸಿದರು.

ಇದಕ್ಕೂ ಮುನ್ನಾ ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರತ್ ಬಚ್ಚೇಗೌಡರ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್ ಶೋ ನಡೆಸುವ ಮೂಲಕ ಪ್ರಚಾರ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!