ಎಂ.ಬಿ ಪಾಟೀಲ್ 
ರಾಜಕೀಯ

2013ರಲ್ಲಿ ದೆಹಲಿಯ ಲೀಲಾ ಪ್ಯಾಲೇಸ್‌ನಲ್ಲಿ ಶೋಭಾ ಮತ್ತು ಯಡಿಯೂರಪ್ಪ ಯಾರನ್ನು ಭೇಟಿ ಮಾಡಿದ್ದರು? ಎಂ.ಬಿ ಪಾಟೀಲ್

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸಲಾಗುವುದು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿರುವುದಾಗಿ ಹೇಳುತ್ತಿರುವ ಇದೇ ಮಾಜಿ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ 2013 ರಲ್ಲಿ ದೆಹಲಿಯ ಹೋಟೆಲ್ ವೊಂದರಲ್ಲಿ ಒಬ್ಬರನ್ನು ಭೇಟಿಯಾಗಿದ್ದರು. ಅವರು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ ಎಂದು ಹೇಳುವ ಮೂಲಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗುರಿಯಾಗಿಸಬಾರದು ಎಂದು ಪಾಟೀಲ್ ಹೇಳಿದರು.

ವೀರಶೈವ-ಲಿಂಗಾಯತ ಸಮುದಾಯದ ಮುಖಂಡರನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಚು ರೂಪಿಸಿ, ಈ ಇಬ್ಬರು ನಾಯಕರು ಬಿಜೆಪಿ ತೊರೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶೆಟ್ಟರ್ ಮತ್ತು ಸವದಿ ಕಾಂಗ್ರೆಸ್ ಸೇರಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ ಎಂದು ಆರೋಪಿಸಿರುವ ನೀವು (ಯಡಿಯೂರಪ್ಪ) 2013ರಲ್ಲಿ ಕೆಜೆಪಿ ಆರಂಭಿಸಿದಾಗ ಬಿಜೆಪಿಯ ಎದೆಗೆ ಚೂರಿ ಹಾಕಿಲ್ಲವೇ ಎಂದು ಪ್ರಶ್ನಿಸಿದರು.

ಇದು ವೀರಶೈವ-ಲಿಂಗಾಯತ ಸಮುದಾಯಕ್ಕೆ ತವರು ಮನೆಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.

1990ರಲ್ಲಿ ಸಮುದಾಯದ ನಾಯಕ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ನಿರ್ಧಾರವನ್ನು ಪಾಟೀಲ್ ಸಮರ್ಥಿಸಿಕೊಂಡರು, ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಿದರು. ಆದರೆ, ಯಡಿಯೂರಪ್ಪನವರು ಚೆನ್ನಾಗಿದ್ದರೂ ಬಿಜೆಪಿ ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿತು ಎಂದು ಪ್ರಶ್ನಿಸಿದರು.

ಬಿಜೆಪಿ ಪ್ರಚಾರದ ನೇತೃತ್ವ ವಹಿಸಲು ರಾಜ್ಯದಲ್ಲಿ ಬಿಜೆಪಿ ನಾಯಕರಿಲ್ಲದ ಕಾರಣ ಮೋದಿ ಶಾ ಅವರನ್ನು ಕರ್ನಾಟಕದ ಖಾಯಂ ನಿವಾಸಿಯನ್ನಾಗಿ ಮಾಡಿದ್ದಾರೆ ಎಂದು ಅವರು ಹೇಳಿದರು.

ಶೆಟ್ಟರ್ ಮತ್ತು ಸವದಿ ಅವರನ್ನು ಸೋಲಿಸಲು ಯಡಿಯೂರಪ್ಪ ಅವರನ್ನು ನಿಯೋಜಿಸಲಾಗಿದೆ. ಯಡಿಯೂರಪ್ಪ ಅವರು ತಮ್ಮ ಇಬ್ಬರು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT