ಕಲಬುರ್ಗಿಯಲ್ಲಿ ಚುನಾವಣಾ ಪ್ರಚಾರದ ರೋಡ್‌ಶೋನಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರತ್ತ ಕೈ ಬೀಸಿದರು. 
ರಾಜಕೀಯ

ಖರ್ಗೆ, ಅವರ ಮಗ ಕುಟುಂಬವೊಂದನ್ನು ಸಂತೋಷಪಡಿಸಲು ಅವಹೇಳನಕಾರಿ ಪದಗಳನ್ನು ಬಳಸುತ್ತಾರೆ: ಪ್ರಧಾನಿ ಮೋದಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 'ವಿಷಕಾರಿ ಹಾವು' ಹೇಳಿಕೆ ಮತ್ತು ಅವರ ಮಗ ಪ್ರಿಯಾಂಕ್ ಖರ್ಗೆ ಅವರ ‘ನಾಲಾಯಕ್’ ಹೇಳಿಕೆ ನೀಡಿದ ಒಂದು ದಿನದ ನಂತರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದಿದ್ದಾರೆ.

ಸಿಂಧನೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 'ವಿಷಕಾರಿ ಹಾವು' ಹೇಳಿಕೆ ಮತ್ತು ಅವರ ಮಗ ಪ್ರಿಯಾಂಕ್ ಖರ್ಗೆ ಅವರ ‘ನಾಲಾಯಕ್’ ಹೇಳಿಕೆ ನೀಡಿದ ಒಂದು ದಿನದ ನಂತರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದಿದ್ದಾರೆ.

ಸಿಂಧನೂರಿನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, 'ಪರಿವಾದವನ್ನು (ಕುಟುಂಬ) ಮೆಚ್ಚಿಸಲು ಎಐಸಿಸಿ ಅಧ್ಯಕ್ಷರು ನನ್ನನ್ನು ‘ವಿಷಪೂರಿತ ಹಾವು’ ಎಂದು ಕರೆದರು ಮತ್ತು ಅವರ ಮಗ ತನ್ನ ತಂದೆಯ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ದಿದ್ದಾರೆ ಎಂದರು.

ಎಸ್‌ಸಿಗಳಿಗೆ ಒಳಮೀಸಲಾತಿ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಂಜಾರ ಸಮುದಾಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಪ್ರಿಯಾಂಕ್ ಖರ್ಗೆ, ಪ್ರಧಾನಿಗೆ ‘ನಾಲಾಯಕ್’ ಎಂದು ಕರೆದರು. 

ರಾಜ್ಯ ಸರ್ಕಾರದ ವಿರುದ್ಧದ 'ಶೇ 40 ಕಮಿಷನ್' ​​ಆರೋಪಗಳ ಬಗ್ಗೆ ಮೌನವಾಗಿರುವ ಪ್ರಧಾನಿಯನ್ನು ಕಾಂಗ್ರೆಸ್ ಪ್ರಶ್ನಿಸಿರುವಾಗ, ಕೇಂದ್ರ ಸರ್ಕಾರವು 1 ರೂಪಾಯಿಯನ್ನು ಮಂಜೂರು ಮಾಡಿದರೆ ಕೇವಲ 15 ಪೈಸೆ ಜನಸಾಮಾನ್ಯರಿಗೆ ತಲುಪುತ್ತದೆ. ಉಳಿದ ಭಾಗವು ಮಧ್ಯವರ್ತಿಗಳ ಜೇಬಿಗೆ ಹೋಗುತ್ತದೆ ಎಂಬ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದರು. 

ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದ ಮೋದಿ, ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಜಾರಿಗೆ ತಂದಿದ್ದು, ಬಡವರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಗಳು ಲಭ್ಯವಿವೆ. ಪಿಎಂಕೆಎಸ್‌ವೈ ಅಡಿಯಲ್ಲಿ ರೈತರು ವರ್ಷಕ್ಕೆ 6,000 ರೂ. ಸಬ್ಸಿಡಿ ಪಡೆಯುತ್ತಿದ್ದಾರೆ ಎಂದರು.

ರಾಯಚೂರು ಜಿಲ್ಲೆಯಲ್ಲಿ ಎರಡು ರೈಲು ಮಾರ್ಗಗಳ ಕಾಮಗಾರಿ ನಡೆಯುತ್ತಿದ್ದು, ವಿಮಾನ ನಿಲ್ದಾಣ ಮಂಜೂರಾಗಿದ್ದು, ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT