ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಅಮಿತ್ ಶಾ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಯತ್ನಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳಿಗೆ ಕಾರಣವಾಗಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ತಿರುಗೇಟು ನೀಡಿದ್ದಾರೆ.

ರಾಯಚೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳಿಗೆ ಕಾರಣವಾಗಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ತಿರುಗೇಟು ನೀಡಿದ್ದಾರೆ.

ಅಮಿತ್ ಶಾ ಪ್ರಚೋದನಕಾರಿ ಭಾಷಣ ಮಾಡಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಯಚೂರಿನಲ್ಲಿ ನಡೆದ ಸಮಾವೇಶದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಜನರು ಶಾಂತಿ ಪ್ರಿಯರು ಮತ್ತು ಬುದ್ಧ ಮತ್ತು ಬಸವ ತತ್ವಗಳಲ್ಲಿ ನಂಬಿಕೆ ಹೊಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಯಾಗುತ್ತದೆ ಎಂದು ಅಮಿತ್ ಶಾ ಹೇಳುತ್ತಾರೆ. ಏಕೆ? ಕಾಂಗ್ರೆಸ್ 60ರಿಂದ 70 ವರ್ಷ ಆಡಳಿತ ಮಾಡಿದೆ. ಗಲಭೆಗಳು ಎಲ್ಲಿ ನಡೆದಿವೆ? ಅಮಿತ್ ಶಾ ಈಗ ಜನರನ್ನು ಕೆರಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಹಿಂಸಾಚಾರ, ಗಲಭೆಗಳ ಇತಿಹಾಸವಿದೆ. ಆದರೆ, ಕರ್ನಾಟಕದ ಜನರು ಶಾಂತಿಪ್ರಿಯರು ಎಂದು ಹೇಳಿದರು.

ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಹಿಂಸಾಚಾರಕ್ಕೆ ಯತ್ನಿಸುತ್ತಿರುವವರು ಯಾರು ಎಂಬುದು ಜನರಿಗೆ ಗೊತ್ತಾಗಲಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಖರ್ಗೆ ಹೇಳಿದರು.

ಪುತ್ರ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿರುವ ಬಗ್ಗೆ ಮಾತನಾಡಿದ ಅವರು, ತಮ್ಮ ಮಗ ಹೆದರುವ ವ್ಯಕ್ತಿಯಲ್ಲ, ಧೈರ್ಯಶಾಲಿ, ತತ್ವ, ಸಿದ್ಧಾಂತಕ್ಕಾಗಿ ಬದುಕುತ್ತಿದ್ದಾನೆ ಎಂದು ಪ್ರತಿಪಾದಿಸಿದರು. 

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲಾಯಕ್ ಬೇಟಾ ಎಂದು ಕರೆದಿದ್ದಕ್ಕಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿತ್ತು.

'ಸ್ವಲ್ಪ ಹೆದರಿದರೆ ಬಿಜೆಪಿಯವರು ನಿಮ್ಮನ್ನು ಸಂಪೂರ್ಣವಾಗಿ ಹೆದರಿಸುತ್ತಾರೆ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಹಿಂಸಾಚಾರವನ್ನು ಸೃಷ್ಟಿಸುತ್ತಾರೆ. ಸೋಲಲು ಪ್ರಧಾನಿ ಹೇಗೆಲ್ಲಾ ಎಲ್ಲಾ ಪ್ರದೇಶಗಳಲ್ಲಿ ಅಲೆದಾಡುತ್ತಿದ್ದಾರೆ ಎಂಬುದನ್ನು ನೋಡಿ, ಅವರು ಹೇಗೆ ಭರವಸೆ ಕಳೆದುಕೊಂಡಿದ್ದಾರೆಂದು ನೋಡಿ. ಅವರ ಆಡಳಿತದಲ್ಲಿ ಬಡವರು ಬಡವರಾಗುತ್ತಿದ್ದಾರೆ, ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಈ ಅಂತರವನ್ನು ಹೋಗಲಾಡಿಸಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗುತ್ತದೆ ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನಾನೇ ಲಾಸ್ಟ್, ಇನ್ನು ಇರಾನ್ ನಂಬಲ್ಲ, ಹಾರ್ಮುಜ್ ಅಮೆರಿಕ ನಿಯಂತ್ರದಣದಲ್ಲಿದೆ': Donald Trump

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

ಮುಂದುವರಿದ ಕೌತುಕ: ಅಮಾವಾಸ್ಯೆ ಕಳೆದ ಬಳಿಕವಷ್ಟೇ ಖಾತೆ ಹಂಚಿಕೆ 'ಗ್ರಹಣ ಮುಕ್ತ'!

'ನನ್ನ ಮುಂದೆ ನಿಂತು ಟೈಪ್ ಮಾಡಿಸಿ ಸಹಿ ಹಾಕಿಸಿದ್ರು: ಆಸ್ಪತ್ರೆಯಲ್ಲಿದ್ದಾಗಲೂ CM ರಾಜೀನಾಮೆ ನೀಡುವಂತೆ ಒತ್ತಡ; ಮನಸ್ಸಿಗೆ ನೋವಾಗಿದೆ'

ರಾಮನಾಮ ಜಪಿಸಿ ರಾಮನ ದುಡ್ಡನ್ನೇ ನುಂಗಿದ ಬಿಜೆಪಿಗರು ಸಂತರಾ? ನೆಹರೂ ಬಗ್ಗೆ ಮಾತಾಡಲು ರಾಮುಲುಗೆ ನೈತಿಕ ಹಕ್ಕಿಲ್ಲ; ತಂಗಡಗಿ