ಎಂಎಲ್'ಸಿ ವಿಶ್ವನಾಥ್ 
ರಾಜಕೀಯ

ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಬಿಜೆಪಿಯಿಂದ ದೊಡ್ಡ ಪಿತೂರಿ: ಎಂಎಲ್'ಸಿ ವಿಶ್ವನಾಥ್

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ನಾನು ಲೋಕಸಭಾ ಸದಸ್ಯ ಆಗಿದ್ದವನು. ನನಗೆ ಹಲವಾರು ಅಧಿಕಾರಿಗಳ ಸಂಪರ್ಕವಿದೆ. ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

1978ರಲ್ಲಿ ಇದೇ ರೀತಿ ಆಗಿತ್ತು. ಹೀಗಾಗಿ ಕಾಂಗ್ರೆಸ್ಸಿನವರು ಬಹಳ ಜಾಗೂರೂಕರಾಗಿ ಕೆಲಸ ಮಾಡಬೇಕು. ದಲಿತ ಮತಗಳು ಯಾವುದೇ ಕಾರಣಕ್ಕೂ ವಿಭಜನೆಯಾಗಲ್ಲ. ದಲಿತರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಚುನಾವಣೆಯಲ್ಲಿ ಯೋಚನೆ ಮಾಡಿ ಬಹಳ ಹುಷಾರಾಗಿ ಕೆಲಸ ಮಾಡಿದಲ್ಲಿ ಸಿದ್ದರಾಮಯ್ಯ ಗೆಲಲ್ಲಿದ್ದಾರೆ’’ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!