ಪ್ರಿಯಾಂಕಾ ಗಾಂಧಿ ವಾದ್ರಾ 
ರಾಜಕೀಯ

ಬಿಜೆಪಿ ಸರ್ಕಾರದ ಭ್ರಷ್ಟ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ: ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ 'ಭ್ರಷ್ಟ ನೀತಿಗಳಿಂದ' ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆಗಳು ಏರಿಕೆಯಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಕನಕಗಿರಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ 'ಭ್ರಷ್ಟ ನೀತಿಗಳಿಂದ' ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆಗಳು ಏರಿಕೆಯಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕರೆಯಲಾಗುತ್ತದೆ. ಗುತ್ತಿಗೆದಾರರ ಸಂಘವೇ ಸರ್ಕಾರಕ್ಕೆ ಈ ಹೆಸರು ನೀಡಿದೆಯೇ ಹೊರತು ಬೇರೆ ಯಾರು ಅಲ್ಲ ಎಂದರು.

ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ  ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಭ್ರಷ್ಟ ಸರ್ಕಾರವು ಭ್ರಷ್ಟ ನೀತಿಗಳನ್ನು ರೂಪಿಸುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಅಡುಗೆ ಅನಿಲ ಸಿಲಿಂಡರ್, ಅಕ್ಕಿ, ಬೇಳೆಕಾಳು, ಹಿಟ್ಟು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಹೇಳಿದರು.

ಗುತ್ತಿಗೆದಾರರು ಸರ್ಕಾರಕ್ಕೆ ಲಂಚ ನೀಡಬೇಕಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನೇಮಕಾತಿ ಹಗರಣಗಳು ನಡೆದಿವೆ. ಬಿಜೆಪಿ ಶಾಸಕರೊಬ್ಬರ ಪುತ್ರನ ಮನೆಯಲ್ಲಿ ಎಂಟು ಕೋಟಿ ರೂಪಾಯಿಯೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಆಪಾದಿತ ನೇಮಕಾತಿ ಹಗರಣಗಳನ್ನು ಉಲ್ಲೇಖಿಸಿದ ಅವರು, ನೀವು (ಜನರು) ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಖರ್ಚು ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸುತ್ತೀರಿ. ಆದರೆ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಗರಣದಂತೆ, ಯಾರೋ ಶಾಸಕರು ಹಣ ಲೂಟಿ ಮಾಡುವುದು ಮತ್ತು ಅಭ್ಯರ್ಥಿಗಳ ನೇಮಕಾತಿ ಸ್ಥಗಿತಗೊಳಿಸಿರುವುದು ಸರ್ಕಾರಕ್ಕೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಚುನಾವಣೆ ದಿನದಂದು ದೊಡ್ಡ (ಬಿಜೆಪಿ) ನಾಯಕರ ಭಾಷಣದಿಂದ ಜನರು ಮೋಸಹೋಗಬೇಡಿ ಮತ್ತು ಅವರ ಪ್ರಮುಖ ಉದ್ದೇಶವೇನೆಂದರೆ ದೈನಂದಿನ ಕೆಲಸಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳಿಂದ ನಿಮ್ಮ ಗಮನವನ್ನು ಬೇರೆಡೆಗೆ ತಿರುಗಿಸುವುದಾಗಿದೆ ಎಂದು ವಾದ್ರಾ ಜನರಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT