ಸಿದ್ದರಾಮಯ್ಯ 
ರಾಜಕೀಯ

ರಾಜ್ಯದ ಜನ ಕಾಂಗ್ರೆಸ್ ಪರವಾಗಿದ್ದಾರೆ: ಸಿದ್ದರಾಮಯ್ಯ (ಸಂದರ್ಶನ)

ರಾಜ್ಯದ ಜನತೆ ಕಾಂಗ್ರೆಸ್ ಪರವಾಗಿದ್ದಾರೆ. ಈ ಬಾರಿ ಸರ್ಕಾರ ರಚಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರು: ರಾಜ್ಯದ ಜನತೆ ಕಾಂಗ್ರೆಸ್ ಪರವಾಗಿದ್ದಾರೆ. ಈ ಬಾರಿ ಸರ್ಕಾರ ರಚಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಚುನಾವಣಾ ಸಿದ್ಧತೆ, ವರುಣಾದಲ್ಲಿ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.

ರಾಜ್ಯ ಪ್ರವಾಸ ಮಾಡಿದ್ದೀರಿ, ಕಾಂಗ್ರೆಸ್‌ ಪಕ್ಷಕ್ಕೆ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಮತ್ತು ಭವಿಷ್ಯದ ಬಗ್ಗೆ ಏನು ಹೇಳುತ್ತೀರಿ?
ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಇರುವುದರಿಂದ ಈ ಬಾರಿ ಉತ್ತಮ ಸ್ಥಾನಗಳ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಒಟ್ಟು 41 ಸ್ಥಾನಗಳ ಪೈಕಿ 30 ಸೀಟುಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದರೆ, ಕಳೆದ ಬಾರಿ ಉತ್ತಮ ಪ್ರದರ್ಶನ ತೋರದ ಮುಂಬೈ-ಕರ್ನಾಟಕದಲ್ಲಿ ಮೇಲುಗೈ ಸಾಧಿಸುವ ಜತೆಗೆ ಮಧ್ಯ ಕರ್ನಾಟಕದಲ್ಲೂ ಸಮಾನ ಸ್ಥಾನಗಳನ್ನು ಪಡೆಯುವ ವಿಶ್ವಾಸವಿದೆ. ಕರಾವಳಿ ಕರ್ನಾಟಕದಲ್ಲೂ ಪರಿಸ್ಥಿತಿ ಸುಧಾರಿಸಿದ್ದು, 13 ಸ್ಥಾನಗಳಲ್ಲಿ ಕನಿಷ್ಠ ಐದರಿಂದ ಆರು ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿದ್ದೇವೆ.

ಲಿಂಗಾಯತ ಮತ ಕ್ರೋಢೀಕರಣಕ್ಕಾಗಿ ವರುಣಾದಲ್ಲಿ ನಿಮ್ಮ ವಿರುದ್ಧ ಟಾರ್ಗೆಟ್ ಭಾಷಣಗಳು ನಡೆದಿವೆ...
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಈ ಮೂಲಕ ಜನರ ಹಾದಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಚುನಾವಣೆಯನ್ನು ಸತ್ಯ, ಕಾರ್ಯಕ್ಷಮತೆ ಮತ್ತು ಕಾರ್ಯಕ್ರಮಗಳ ಮೇಲೆ ಎದುರಿಸಬೇಕು, ಆದರೆ ಬಿಜೆಪಿಗೆ ಇದನ್ನು ಮಾಡುತ್ತಿಲ್ಲ. ಬಿಜೆಪಿ ಪಕ್ಷವು ಚುನಾವಣೆಯನ್ನು ಎದುರಿಸಲು ಧರ್ಮ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದೆ. ಲಿಂಗಾಯತರು ಅತ್ಯಂತ ದನಿ ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದು, ಹಿಂದಿನ ಚುನಾವಣೆಯಲ್ಲಿ ರೇವಣ್ಣಸಿದ್ದಯ್ಯ ಮತ್ತು ಕಾಪು ಸಿದ್ದಲಿಂಗಸ್ವಾಮಿ ಅವರ ಭಾರ ಹಾಕಿದ್ದರು.

ವರುಣಾದ ಸಾಮಾಜಿಕ ರಚನೆ ಬಿಜೆಪಿಗೆ ಅಹಿಂದ ಮತಗಳಿಗೆ ಕಡಿವಾಣಕ್ಕೆ ಅವಕಾಶ ನೀಡುತ್ತದೆಯೇ?
ಕ್ಷೇತ್ರದಲ್ಲಿ ಲಿಂಗಾಯತ ಮತ್ತು ದಲಿತ ಮತದಾರರು ಸಮಾನ ಸಂಖ್ಯೆಯಲ್ಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಶೇ.20ರಷ್ಟು ಲಿಂಗಾಯತರು ನನಗೆ ಮತ ನೀಡಿ, ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಲಿದ್ದಾರೆಂಬ ವಿಶ್ವಾಸವಿದೆ. ಶೇ.90ರಷ್ಟು ದಲಿತರು, ಕುರುಬರು, ಉಪ್ಪಾರರು, ಮುಸ್ಲಿಮರು ಕಾಂಗ್ರೆಸ್ ಪರವಾಗಿದ್ದಾರೆ. ಶೇ.50-60ರಷ್ಟು ನಾಯಕ ಸಮುದಾಯದವರು ನನ್ನ ಪರವಾಗಿದ್ದಾರೆ. ವರುಣಾದಲ್ಲಿನ ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿಯೇ ಎರಡು ಬಾರಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನ ಪುತ್ರ ಯತೀಂದ್ರ ಕೂಡ 58,000 ಮತಗಳ ಅಂತರಿಂದ ಗೆಲುವು ಸಾಧಿಸಿದ್ದ.

ಹಳೇ ಮೈಸೂರು ಭಾಗ ಸವಾಲಾಗಿ ಪರಿಣಮಿಸಲಿದೆಯೇ?
2018ರ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮಂಡ್ಯದಲ್ಲೂ ಕಳಪೆ ಸಾಧನೆ ಮಾಡಲಾಗಿದೆ. ಆದರೆ, ಈ ಬಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಪರ ಅಲೆ ಶುರುವಾಗಿದೆ.

ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮೈತ್ರಿ ಆಗಲಿದೆಯೇ? ಜೆಡಿಎಸ್ ಎಷ್ಟು ಸ್ಥಾನ ಗೆಲ್ಲಲಿದೆ?
ಖಂಡಿತವಾಗಿಯೂ, ಕೆಲವು ಸ್ಥಾನಗಳಲ್ಲಿ ಮೈತ್ರಿ ಇದ್ದೇ ಇರುತ್ತದೆ. ಆದರೆ, ಎಲ್ಲೆಡೆ ಇರುವುದಿಲ್ಲ. ಹಿಂದಿನ ಚುನಾವಣೆಯಲ್ಲಿ ಒಕ್ಕಲಿಗರು ಆಕ್ರಮಣಕಾರಿ ಮನಸ್ಥಿತಿಯಲ್ಲಿದ್ದರು. ಇದರಿಂದಾಗಿ ಮತಗಳು ಜೆಡಿಎಸ್ ಪಕ್ಷಕ್ಕೆ ಹೋಗಿದ್ದವು. ಆದರೆ, ಈ ಬಾರಿ ಪರಿಸ್ಥಿತಿ ಭಿನ್ನವಾಗಿದ್ದು. ಶೇ.60ರಷ್ಟು ಒಕ್ಕಲಿಗರ ಮತಗಳು ಪಕ್ಷಕ್ಕೆ ಬರಲಿವೆ. ಗರಿಷ್ಠ 25 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಮಂಡ್ಯದ ಉದಾಹರಣೆಯನ್ನೇ ತೆಗೆದುಕೊಂಡರೆ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿತ್ತು. ಆದರೆ, ಈ ಬಾರಿ ಸೋಲು ಕಾಣಲಿದೆ. ಕನಿಷ್ಠ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ.

ಮೇ 7ರ ನಂತರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ರಣತಂತ್ರ ರೂಪಿಸಲಿದೆ ಎಂಬ ವರದಿಗಳಿವೆ...?
ವರುಣಾ ಮತ್ತು ಇತರ ಕೆಲವು ಸ್ಥಾನಗಳಲ್ಲಿ ನಿರೀಕ್ಷೆಯಂತೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಕೈಜೋಡಿಸಿದರೂ ಆಶ್ಚರ್ಯವಿಲ್ಲ. ಆ ಪಕ್ಷಗಳ ತಂತ್ರಗಳ ಬಗ್ಗೆ ಜನರಿಗೆ ಅರಿವಿದೆ. ಬಿಜೆಪಿ ಕಳಪೆ ಆಡಳಿತವನ್ನು ನೋಡಿದ ಜನತೆ ಕಾಂಗ್ರೆಸ್ ಪಕ್ಷತ್ತೆ ಮತ ಹಾಕಲು ನಿರ್ಧರಿಸಿದ್ದಾರೆಂಬ ವಿಶ್ವಾಸವಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಉತ್ತಮ ಪ್ರಭಾವ ಬೀರಲಿದೆ.

ಸ್ವಕ್ಷೇತ್ರದಲ್ಲಿ ಯತೀಂದ್ರ ಯಾವ ರೀತಿ ಪ್ರಚಾರ ನಡೆಸುತ್ತಿದ್ದಾರೆ?
ಪ್ರಚಾರದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ವರುಣಾ ಕ್ಷೇತ್ರದ ಶಾಸಕರಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಜನರ ವಿಶ್ವಾಸವನ್ನೂ ಗಳಿಸಿದ್ದಾರೆ. ಇಷ್ಟು ವರ್ಷ ಜನ ನನ್ನನ್ನು ನೋಡಿದ್ದಾರೆ, ಹೊಸ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರು ನನ್ನ ಜೊತೆಗಿದ್ದೇ ಇರುತ್ತಾರೆ. ನನ್ನ ಅಭಿವೃದ್ಧಿ ಕಾರ್ಯಗಳಿಗೆ ಅವರು ಬೆಂಬಲವಾಗಿ ನಿಲ್ಲುತ್ತಾರೆ ಎಂಬ ಭರವಸೆ ನನಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT