ರಾಜಕೀಯ

ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ನೋಡಿದ ಬಳಿಕವೇ ನನಗೆ ತೃಪ್ತಿ: ಎಚ್‌ಡಿ ದೇವೇಗೌಡ

Ramyashree GN

ಹಾಸನ: ಇಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾವುಕರಾಗಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಹಾಸನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲುವುದನ್ನು ಕಂಡ ನಂತರವೇ ನನಗೆ ಸಮಾಧಾನವಾಗುತ್ತದೆ ಎಂದಿದ್ದಾರೆ.

ಸಭೆಯ ಮುಂದೆ ಗುರುವಾರ ಸವಾಲು ಹಾಕಿದ ಅವರು, ಹಾಸನದಲ್ಲಿ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಮಂಜೂರಾದ ಬಹುಮುಖ್ಯ ಅಭಿವೃದ್ಧಿ ಕಾಮಗಾರಿಗಳನ್ನು ಹಾಳು ಮಾಡಿದ ಪ್ರೀತಂ ಜೆ ಗೌಡ ಸೋಲುವುದನ್ನು ನಾನು ನೋಡಬೇಕು ಎಂದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿರುವ ಬಿಜೆಪಿಗೆ ಒಂದೇ ಒಂದು ಮತವನ್ನೂ ಹಾಕಬೇಡಿ ಎಂದು ಪ್ರೀತಂ ಜೆ ಗೌಡ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಎಚ್.ಡಿ.ದೇವೇಗೌಡರು ಅಲ್ಪಸಂಖ್ಯಾತರಿಗೆ ಮನವಿ ಮಾಡಿದ್ದಾರೆ.

ತಾವು ಜಾತ್ಯತೀತ ನಾಯಕರಾಗಿದ್ದು, ಧರ್ಮದ ಆಧಾರದ ಮೇಲೆ ಜನರಿಗೆ ಎಂದಿಗೂ ತಾರತಮ್ಯ ಮಾಡುವುದಿಲ್ಲ. ಆತುರದ ಹೇಳಿಕೆ ನೀಡಿ ನಮ್ಮ ಕುಟುಂಬಕ್ಕೆ ಅವಮಾನ ಮಾಡಿದ ಹಾಸನ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಹೇಳಲು ತಾವು ಸಿದ್ಧರಿಲ್ಲ ಎಂದು ತಿಳಿಸಿದರು.

ಚುನಾವಣೆಯಲ್ಲಿ ಬೇರೆ ಪಕ್ಷಗಳಿಗೆ ಮತ ಹಾಕಿ ನೋಯಿಸಬೇಡಿ. ತಾವು ತಮ್ಮ ಕೊನೆಯ ಉಸಿರು ಇರುವವರೆಗೂ ಸಮಸ್ಯೆಗಳಿಗಾಗಿ ಹೋರಾಡುವುದಾಗಿ ಮತ್ತು ಇಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲನ್ನು ಅವರ ಕಣ್ಣಲ್ಲಿ ನೋಡಬೇಕು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಬಾರಿ ಭೇಟಿ ಮಾಡಿದರೂ ಐಐಟಿ ಪ್ರಸ್ತಾವನೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. 

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಭವಾನಿ ರೇವಣ್ಣ ಮಾತನಾಡಿದರು.

SCROLL FOR NEXT