ಆಮ್ ಆದ್ಮಿ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿರುವುದು. 
ರಾಜಕೀಯ

ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ ಸೇವೆ: ಆಪ್ ಪ್ರಣಾಳಿಕೆ ಬಿಡುಗಡೆ

ಆಮ್ ಆದ್ಮಿ ಪಕ್ಷವು ಶುಕ್ರವಾರ ಬಿಡುಗಡೆ ಮಾಡಿದ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಸಾರ್ವತ್ರಿಕ ಉಚಿತ ಆರೋಗ್ಯ ಸೇವೆ ಒದಗಿಸುವ ಭರವಸೆಯನ್ನು ಮತದಾರರಿಗೆ ನೀಡಿದೆ.

ಬೆಂಗಳೂರು: ಆಮ್ ಆದ್ಮಿ ಪಕ್ಷವು ಶುಕ್ರವಾರ ಬಿಡುಗಡೆ ಮಾಡಿದ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಸಾರ್ವತ್ರಿಕ ಉಚಿತ ಆರೋಗ್ಯ ಸೇವೆ ಒದಗಿಸುವ ಭರವಸೆಯನ್ನು ಮತದಾರರಿಗೆ ನೀಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಆಮ್‌ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಅಶ್ವಿನ್‌ ಮಹೇಶ್‌, ರಾಜ್ಯ ಮಾಧ್ಯಮ ಸಂಚಾಲಕಿ ಉಷಾ ಮಹೇಶ್‌ ಬಿಡುಗಡೆ ಮಾಡಿದರು.

ಪ್ರಣಾಳಿಕೆಯಲ್ಲಿ ನವದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ರಾಜ್ಯದಲ್ಲಿ ದ್ವಿಭಾಷಾ ನೀತಿ, ಆಡಳಿತದಲ್ಲಿ ಪಾದರ್ಶಕತೆ ಕಾಯ್ದುಕೊಳ್ಳಲು ಮೊಬೈಲ್ ಸೇವಗೆ ಮೊದಲ ಆದ್ಯತೆ ಸೇರಿ ಹಲವು ಭರವಸೆಗಳನ್ನು ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ನೀಡಿದೆ.

ಕಮಿಷನ್‌ ಅಥವಾ ಲಂಚಕ್ಕಾಗಿ ಯಾವುದೇ ಬೇಡಿಕೆಯನ್ನೂ ಪಕ್ಷ ಸಹಿಸುವುದಿಲ್ಲ. ಸರ್ಕಾರಿ ಸೇವೆ, ನೇಮಕಾತಿ, ಅಭಿವೃದ್ಧಿ ಕಾಮಗಾರಿಗಳಲ್ಲಿ ಶೇ 100ರಷ್ಟು ಪಾರದರ್ಶಕತೆ ತರಲಾಗುವುದು. ಸಣ್ಣ ಭ್ರಷ್ಟಾಚಾರಕ್ಕೂ ಆಸ್ಪದ ನೀಡುವುದಿಲ್ಲ. ಆರ್‌ಟಿಐ ಕಾಯ್ದೆ ಇನ್ನಷ್ಟು ಬಲಪಡಿಸಲಾಗುವುದು. ಸ್ಥಳೀಯ ಸಂಸ್ಥೆಗಳಿಗೆ ಸಂಪೂರ್ಣ ಅಧಿಕಾರ, ರಾಜ್ಯದ ಎಲ್ಲ ಪ್ರದೇಶಗಳಲ್ಲಿ ಸಮಾನ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಲಾಗಿದೆ ಎಂದು ಪೃಥ್ವಿ ರೆಡ್ಡಿ ಅವರು ಹೇಳಿದ್ದಾರೆ.

ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡುವ ಜತೆಗೆ, ಅಗತ್ಯ ಅನುದಾನ ಒದಗಿಸುವುದು, ಮೊಬೈಲ್‌ ಸೇವೆಗೆ ಆದ್ಯತೆ, ಮನೆ ಬಾಗಿಲಿಗೆ ಪಡಿತರ ವಿತರಣೆ, ಜನರ ಬಳಿಗೆ ಸರ್ಕಾರಿ ಸೇವೆಗಳು, ಪ್ರತಿ ಜಿಲ್ಲೆಯಲ್ಲೂ ಬೆಳೆಗಾರರ ಸಂಘ ರಚನೆ, ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದು, ಗುತ್ತಿಗೆ ಶಿಕ್ಷಕರ ಸೇವೆ ಕಾಯಂ, ರಾಜ್ಯದ ಎಲ್ಲ ಜನರಿಗೂ ಕುಡಿಯುವ ನೀರು ಉಚಿತ ಪೂರೈಕೆ, ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ, ದ್ವಿಭಾಷಾ ನೀತಿಯ ಅಳವಡಿಕೆ, ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ, ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ. ಪ್ರತಿ ವರ್ಷ 2 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಜಿಲ್ಲಾವಾರು ಪ್ರಣಾಳಿಕೆಯನ್ನೂ ರೂಪಿಸಲಾಗಿದ್ದು, ಆಯಾ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳಿಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ.

ಪ್ರಣಾಳಿಕೆಯ ಭರವಸೆಗಳು ಇಂತಿವೆ.

  • ಶಾಲೆಗಳಲ್ಲಿ ದೇಶ-ಭಕ್ತಿ ಮತ್ತು ಹ್ಯಾಪಿನೆಸ್ ಪಠ್ಯಕ್ರಮ
  • ಗೃಹಬಳಕೆದಾರರಿಗೆ 300 ಯೂನಿಟ್ ಉಚಿತ ವಿದ್ಯುತ್
  • ನಗರಗಳಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ.
  • ಹಳೆಯ ಪಿಂಚಣಿ ಯೋಜನೆ ಜಾರಿ.
  • ಬಡವರಿಗೆ ಕಾನೂನು ನೆರವು
  • ದ್ವಿ-ಭಾಷಾ ನೀತಿ (ಕನ್ನಡ ಮತ್ತು ಇಂಗ್ಲಿಷ್)
  • ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಬೋಧನೆ
  • ಸರ್ಕಾರಿ ಉದ್ಯೋಗಗಳಲ್ಲಿ ಕನ್ನಡ ಕಡ್ಡಾಯ
  • ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.33ಮೀಸಲಾತಿಯ ಪರಿಣಾಮಕಾರಿ ಅನುಷ್ಠಾನ
  • ಚುನಾವಣೆಗಳಲ್ಲಿ ಮತದಾನದ ವಯಸ್ಸನ್ನು 16 ವರ್ಷಕ್ಕೆ ಇಳಿಸುವುದು
  • ಪ್ರತಿ ವರ್ಷ 2 ಲಕ್ಷ ಉದ್ಯೋಗಗಳ ಸೃಷ್ಟಿ
  • ನಿರುದ್ಯೋಗ ಭತ್ಯೆ
  • ಸ್ಥಳೀಯರಿಗೆ ಶೇ.80 ವರೆಗೆ ಉದ್ಯೋಗ ಮೀಸಲಾತಿ
  • ಕೃಷಿಗೆ 12 ಗಂಟೆ ಉಚಿತ ವಿದ್ಯುತ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT