ಬೆಳಗಾವಿಯಲ್ಲಿ ರೋಡ್‌ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ 
ರಾಜಕೀಯ

ಬೆಂಗಳೂರಿನಲ್ಲಿ ಮೋದಿ ಅಬ್ಬರದ ರೋಡ್‌ಶೋ; ಇತ್ತ ಬೆಳಗಾವಿಯಲ್ಲಿ ಅಮಿತ್ ಶಾ ಮೆಗಾ ರೋಡ್ ಶೋ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

ಅಪಾರ ಸಂಖ್ಯೆಯ ಬಿಜೆಪಿ ಬೆಂಬಲಿಗರು ಅಮಿತ್ ಶಾ ಅವರ ವಾಹನವನ್ನು ಸುತ್ತುವರಿದು ಮೆರವಣಿಗೆಯಲ್ಲಿ ತೆರಳಿದರು. ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದ ಜನರತ್ತ ಶಾ ಕೈ ಬೀಸಿದರು.

ಇಂದು ಮುಂಜಾನೆ, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಗಾ ರೋಡ್‌ಶೋ ನಡೆಸಿದರು. ರಸ್ತೆಯ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ಮೋದಿಗೆ ಜೈಕಾರ ಹಾಕಿದರು. ಮೋದಿ ಜನರತ್ತ ಕೈ ಬೀಸಿದರು.

ಹೂವಿನಿಂದ ಅಲಂಕರಿಸಲ್ಪಟ್ಟ ವಾಹನದ ಮೇಲೆ ನಿಂತು, ರಸ್ತೆಗಳ ಎರಡೂ ಬದಿಗಳಲ್ಲಿ ಮತ್ತು ಹತ್ತಿರದ ಕಟ್ಟಡಗಳ ಮೇಲೆ ನೆರೆದಿದ್ದ ಜನರತ್ತ ಪ್ರಧಾನಿ ಮೋದಿ ಕೈ ಬೀಸಿದರು ಮತ್ತು ಜನರಿಂದ 'ಮೋದಿ, ಮೋದಿ' ಎಂಬ ಘೋಷಣೆಗಳು ಕೇಳಿಬಂದವು.

ಹೊಸ ತಿಪ್ಪಸಂದ್ರ ರಸ್ತೆಯಲ್ಲಿರುವ ಕೆಂಪೇಗೌಡ ಪ್ರತಿಮೆಯಿಂದ ರೋಡ್‌ಶೋ ಆರಂಭಿಸಿದ ಪ್ರಧಾನಿ ಟ್ರಿನಿಟಿ ಸರ್ಕಲ್‌ನಲ್ಲಿ ಸಮಾರೋಪಗೊಳಿಸಿದರು.

ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರದಲ್ಲಿ ಸತತ ಎರಡನೇ ದಿನಕ್ಕೆ ಬೆಂಗಳೂರಿನಲ್ಲಿ ಸುಮಾರು 10 ಕಿಲೋಮೀಟರ್ ಉದ್ದದ ರೋಡ್‌ಶೋ ನಡೆಸಿದರು. ಇದು ಬಿಜೆಪಿಯ ಚುನಾವಣಾ ಭವಿಷ್ಯವನ್ನು  ಹೆಚ್ಚಿಸುವ ನಿರೀಕ್ಷೆಯಿದೆ.

ಪ್ರಧಾನಿ ಮೋದಿಯ ದರ್ಶನಕ್ಕಾಗಿ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಬೃಹತ್ ಜನಸಮೂಹವು ಡ್ರಮ್ಸ್ ಸೇರಿದಂತೆ ಸಂಗೀತ ವಾದ್ಯಗಳನ್ನು ನುಡಿಸುವ ಚಿತ್ರಣವೂ ಇತ್ತು. ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT