ಜಗದೀಶ್ ಶೆಟ್ಟರ್(ಸಂಗ್ರಹ ಚಿತ್ರ) 
ರಾಜಕೀಯ

ಬಿಜೆಪಿಯಲ್ಲಿ ಗುಲಾಮಿ ಸಂಸ್ಕೃತಿ, ಜೀ ಹುಜೂರ್ ಅನ್ನೋರನ್ನ ಅಕ್ಕಪಕ್ಕ ಇಟ್ಕೊಳ್ತಾರೆ: ಸಂತೋಷ್ ವಿರುದ್ಧ ಶೆಟ್ಟರ್ ವಾಗ್ದಾಳಿ

ಬಿಜೆಪಿಯಲ್ಲಿ ಬಲಾಢ್ಯ ಹಿರಿಯ ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದೆ.ಎರಡು ವರ್ಷ ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸಲಾಯಿತು. ಅವರೇ ಸ್ವಪ್ರೇರಣೆಯಿಂದ, ಸ್ವಇಚ್ಛೆಯಿಂದ ರಾಜೀನಾಮೆ ನೀಡಿದರು ಎಂದು ಸುದ್ದಿ ಹರಡಿಸಲಾಯಿತು.

ಹುಬ್ಬಳ್ಳಿ: ಬಿಜೆಪಿಯಲ್ಲಿ ಬಲಾಢ್ಯ ಹಿರಿಯ ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದೆ.ಎರಡು ವರ್ಷ ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸಲಾಯಿತು. ಅವರೇ ಸ್ವಪ್ರೇರಣೆಯಿಂದ, ಸ್ವಇಚ್ಛೆಯಿಂದ ರಾಜೀನಾಮೆ ನೀಡಿದರು ಎಂದು ಸುದ್ದಿ ಹರಡಿಸಲಾಯಿತು. ಆದರೆ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಇಳಿಸಲಾಯಿತು ಎಂದು ಕಾಂಗ್ರೆಸ್ ನಾಯಕ, ಹುಬ್ಬಳ್ಳಿ-ಧಾರವಾಡ ಕೇಂದ್ರದಿಂದ ಸ್ಪರ್ಧಿಸುತ್ತಿರುವ ಜಗದೀಶ್ ಶೆಟ್ಟರ್ ಮತ್ತೆ ಆರೋಪಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದ ಅವರು, 2021ರಲ್ಲಿ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಏಕೆ ಎಂಬುದಕ್ಕೆ ಇದುವರೆಗೆ ಉತ್ತರವಿಲ್ಲ. ವಯಸ್ಸಾದ ಕಾರಣ ಸಿಎಂ ಸ್ಥಾನದಿಂದ ಕೆಳಗಿಳಿದರು ಎನ್ನುತ್ತಾರೆ, ಹಾಗಾದರೆ ವಯಸ್ಸಾದ ಯಡಿಯೂರಪ್ಪನವರನ್ನು ಈ ಬಾರಿ ಚುನಾವಣೆಯಲ್ಲಿ ಏಕೆ ಬಳಕೆ ಮಾಡಿಕೊಂಡರು ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಎಲ್ಲಾ ಹಂತದಲ್ಲಿಯೂ ಬಳಕೆ ಮಾಡುತ್ತಿರುವ ಯಡಿಯೂರಪ್ಪನವರ ಮುಖ್ಯಮಂತ್ರಿ ಅವಧಿಯನ್ನು ಪೂರ್ಣಗೊಳಿಸಬಹುದಿತ್ತಲ್ಲವೇ, ಬಿಜೆಪಿಯಲ್ಲಿ ಬಲಾಢ್ಯ ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಲೇ ಇದೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ಪಾತ್ರ ಮುಖ್ಯವಾಗಿದೆ. ಈಗ ಈಶ್ವರಪ್ಪನವರಿಗೂ ರಾಜಕೀಯ ನಿವೃತ್ತಿ ನೀಡಿ ಮನೆಗೆ ಕಳುಹಿಸಲಾಗಿದೆ ಎಂದರು.

ಇತ್ತೀಚೆಗೆ ಮಾಧ್ಯಮಗಳಲ್ಲಿ, ವಿಡಿಯೊಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಸಂತೋಷ್ ಅವರ ಹೇಳಿಕೆ ಹರಿದಾಡುತ್ತಿದೆ. ಬಿಜೆಪಿ ನಂಬಿಕೆ ಇಟ್ಟಿರುವುದು ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೇ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ ಎಂದು ಲಿಂಗಾಯತರ ವಿರೋಧಿ ಹೇಳಿಕೆ ನೀಡಿ ಮಾಧ್ಯಮಗಳಲ್ಲಿ ಸುದ್ದಿ ವೈರಲ್ ಆದಾಗ ತಾವು ಆ ರೀತಿ ಹೇಳಿಯೇ ಇಲ್ಲ ಎನ್ನುತ್ತಾರೆ, ಹಾಗಾದರೆ ತನಿಖೆ ಮಾಡಿಸಲಿ, ಬಿಜೆಪಿ ಲಿಂಗಾಯತರ ವಿರುದ್ಧವಾಗಿದೆ ಎಂದು ಟೀಕಿಸಿದರು.

ಬಿಜೆಪಿಯಲ್ಲಿ ಗುಲಾಮಿ ಸಂಸ್ಕೃತಿ, ಜೀ ಹುಜೂರ್ ಅನ್ನೋರನ್ನ ಅಕ್ಕಪಕ್ಕ ಇಟ್ಕೊಳ್ತಾರೆ, ಅಲ್ಲಿ ನಿಜವಾಗಿಯೂ ಪಕ್ಷಕ್ಕಾಗಿ ದುಡಿಯುವ ನಾಯಕರು, ಕಾರ್ಯಕರ್ತರಿಗೆ ಬೆಲೆಯಿಲ್ಲ ಎಂದರು. ಸಿಡಿ ಕೇಸಿನಲ್ಲಿ ಹೆಸರು ಕೇಳಿಬಂದವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡಲಾಗಿದೆ. ಹಾಗಾದರೆ ಇದೇನಾ ನಿಮ್ಮ ಸಂಸ್ಕೃತಿ, ಸಭ್ಯತೆ ಎಂದು ಶೆಟ್ಟರ್ ಪ್ರಶ್ನಿಸಿದರು. 

ನನ್ನ ಗುರಿ ಇರುವುದು ಈ ಬಾರಿ ಶಾಸಕನಾಗಿ 24X7 ಕುಡಿಯುವ ನೀರಿನ ಯೋಜನೆ ಜಾರಿ‌ ಮಾಡುತ್ತೇನೆ. ಅತೀ ಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ. ಬಹಳ ಜನ ನಾನು ಸೋಲಬೇಕು ಎಂದು ಕನಸು ಕಾಣುತ್ತಿದ್ದಾರೆ. ವಿಜಯ ಸಂಕೇಶ್ವರ ಅವರು ಬೇರೆ ಬೇರೆ ಒತ್ತಡಕ್ಕೆ ಮಾತನಾಡಿದ್ದಾರೆ. ಅವರ ಬಗ್ಗೆ ಹೆಚ್ಚು ನಾನು ಮಾತನಾಡುವುದಿಲ್ಲ. ಸುನಾಮಿಯ ಗೇಟ್​ ತೆರೆದಿದೆ. ಅದರಲ್ಲಿ ಇವರು ಕೊಚ್ಚಿ ಹೋಗುತ್ತಾರೆ. ಅದನ್ನು ತಡೆದುಕೊಳ್ಳುವ ಶಕ್ತಿ ಬಿಜೆಪಿಗಿಲ್ಲ ಎಂದರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಎಲ್ಲ ನಾಯಕರು ನನ್ನ ಜೊತೆ ಕೈ ಜೋಡಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರು, ಬೇರೆ ಬೇರೆ ಕ್ಷೇತ್ರದಲ್ಲೂ ನಾನು ಪ್ರಚಾರ ಮಾಡಿದ್ದೆನೆ. ಕೊಪ್ಪಳ, ವಿಜಯಪುರ, ಹಾವೇರಿ, ನರಗುಂದ, ಕಿತ್ತೂರ ಜಿಲ್ಲೆಯಲ್ಲಿ ಪ್ರಚಾರ ಮಾಡಿದ್ದೇನೆ. ಎಲ್ಲ ಕಡೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸಿಗ್ತಾ ಇದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚು ಬೆಂಬಲ ಸಿಗ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT