ಜಿ.ಪರಮೇಶ್ವರ್ 
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆ ಕೊಡ್ತೀನಿ ಅಂದರೆ ಬೇಡ ಅನ್ನೋಕಾಗುತ್ತಾ? ಪರಮೇಶ್ವರ್

ನನಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನುವುದಕ್ಕೆ ಆಗುತ್ತದಾ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

ತುಮಕೂರು: ನನಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನುವುದಕ್ಕೆ ಆಗುತ್ತದಾ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ನಾನು ಸಿಎಂ ಆಗಬೇಕು ಎಂದು ಜಿಲ್ಲೆಯ ಅಭಿಮಾನಿಗಳ ಅಪೇಕ್ಷೆ ಇದೆ ಎಂದ ತಕ್ಷಣ ಅದು ಸಾಧ್ಯ ಆಗೋದಿಲ್ಲ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ, ಕೆಲವೊಮ್ಮೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ.  ಎಕ್ಸಿಟ್ ಪೋಲ್‌ಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ. ಇನ್ನು ಏನಿದ್ದರೂ ಸಂಖ್ಯೆಯ ದೃಢೀಕರಣ ಅಷ್ಟೇ ಬಾಕಿ. ನಾವು 130 ಸ್ಥಾನ ಪಡೆಯುತ್ತೇವೆ. ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಸಿದ್ದರಾಮಯ್ಯ ಕೂಡ ವರುಣಾದಲ್ಲಿ ಯಾವುದೇ ತೊಂದರೆ ಇಲ್ಲದೇ ಗೆಲ್ಲುತ್ತಾರೆ. ನಾನು ಕೂಡ ಕೊರಟಗೆರೆಯಲ್ಲಿ ಹಿಂದಿಗಿಂತ ಹೆಚ್ಚಿನ ಬಹುಮತದಲ್ಲಿ ಗೆಲ್ಲುತ್ತೇನೆ. 2013ರಲ್ಲಿ ನಾನು 120 ಸೀಟ್ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ 122 ಸ್ಥಾನ ಬಂದಿತ್ತು. ಈಗ ನಾನು 130 ಸ್ಥಾನ ಎಂದು ಹೇಳಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಆಯ್ಕೆಯು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಸಿಎಲ್‍ಪಿ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರು ಒಳ್ಳೆ ಆಡಳಿತ ಕೊಡುತ್ತಾರೋ ಅಂತವರನ್ನು ಹೈಕಮಾಂಡ್ ಸಿಎಂ ಮಾಡಬಹುದು.  ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿ ಹಲವು ಮಂದಿ ಇದ್ದಾರೆ. ಅವರಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್