ಬೆಂಗಳೂರು: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ಚುನಾವಣೆಯಲ್ಲಿ ಸೋಲು ಅನುಭವಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಶೆಟ್ಟರ್ ಅವರು ಆರು ಬಾರಿ ಶಾಸಕರಾಗಿದ್ದಾರೆ ಮತ್ತು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರಾಗಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿಯ ಮಹೇಶ ಟೆಂಗಿನಕಾಯಿ ವಿರುದ್ಧ 34,289 ಮತಗಳ ಅಂತರದಿಂದ ಸೋತಿದ್ದರು.
ಶೆಟ್ಟರ್ ಅವರು ತಮ್ಮ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ, ಉತ್ತರ ಕರ್ನಾಟಕದ ಲಿಂಗಾಯತ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಅವರು ವರ್ಚಸ್ಸು ಹೊಂದಿದ್ದು, ಹಲವು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲು ಸಹಾಯ ಮಾಡಿದೆ. ಹೀಗಾಗಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ.
ಶೆಟ್ಟರ್ ಅವರು ಬಿಜೆಪಿ ತೊರೆದಿರುವುದರಿಂದ ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಅವರಿಗೆ ಸೂಕ್ತ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಚಿಂತಕರು ಈಗಾಗಲೇ ಪಕ್ಷದ ರಾಜ್ಯ ನಾಯಕತ್ವಕ್ಕೆ ವರದಿ ಸಲ್ಲಿಸಿದ್ದಾರೆ.
ಇದನ್ನು ಓದಿ: ವಿಧಾನಸಭೆ ಚುನಾವಣೆಯಲ್ಲಿ ಸೋಲು; ಹೊಸ ಸರ್ಕಾರದಲ್ಲಿ ಹುದ್ದೆ ಅಥವಾ ಲೋಕಸಭಾ ಟಿಕೆಟ್, ಜಗದೀಶ್ ಶೆಟ್ಟರ್ ಮುಂದಿನ ನಡೆಯೇನು?
ಕೆಲವೇ ದಿನಗಳಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಶೆಟ್ಟರ್ ಅವರಿಗೆ ಸ್ಥಾನ ಕಲ್ಪಿಸಲು ಕಾಂಗ್ರೆಸ್ ತೀವ್ರ ಪ್ರಯತ್ನ ನಡೆಸುತ್ತಿದೆ ಎನ್ನಲಾಗಿದೆ.
ಆದಾಗ್ಯೂ, ಮಾಜಿ ಮುಖ್ಯಮಂತ್ರಿ ಶಟ್ಟರ್ ಅವರಿಗೆ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಅಥವಾ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಗೆ ಅವರನ್ನು ಪರಿಗಣಿಸಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
ಇನ್ನು ಐಎಎನ್‌ಎಸ್‌ನೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಶೆಟ್ಟರ್, "ನಾನು ಬೇಷರತ್ತಾಗಿ ಕಾಂಗ್ರೆಸ್‌ಗೆ ಸೇರಿದ್ದೇನೆ ಮತ್ತು ಯಾವುದೇ ಹುದ್ದೆಗಳ ಬಗ್ಗೆ ನನ್ನ ಬಳಿ ಉತ್ತರವಿಲ್ಲ" ಎಂದಿದ್ದಾರೆ.