ಶಾಮನೂರ್ ಶಿವಶಂಕರಪ್ಪ 
ರಾಜಕೀಯ

ಲಿಂಗಾಯತವಾದ ಹಿಂದುತ್ವವಲ್ಲ, ನಾವು ಬಸವ ತತ್ವ ಪಾಲಿಸುವವರು, ಬಿಜೆಪಿಯ ಹಿಂದುತ್ವವಾದ ಒಪ್ಪುವುದಿಲ್ಲ: ಶಾಮನೂರ್ ಶಿವಶಂಕರಪ್ಪ

ಲಿಂಗಾಯತವಾದ ಹಿಂದುತ್ವವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಸ್ಥ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸತತ 6ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭಾರತದ ಅತ್ಯಂತ ಹಿರಿಯ 92 ವರ್ಷದ ಶಾಮನೂರ್ ಶಿವಶಂಕರಪ್ಪ ಹೇಳಿದ್ದಾರೆ.

ಬೆಂಗಳೂರು: ಲಿಂಗಾಯತವಾದ ಹಿಂದುತ್ವವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಸ್ಥ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸತತ 6ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭಾರತದ ಅತ್ಯಂತ ಹಿರಿಯ 92 ವರ್ಷದ ಶಾಮನೂರ್ ಶಿವಶಂಕರಪ್ಪ ಹೇಳಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿದ್ದಕ್ಕೆ ಸ್ಪರ್ಧಿಸಿದೆ. ಕ್ಷೇತ್ರದ ಜನರು ಕೂಡ ನನ್ನನ್ನು ಆಶೀರ್ವದಿಸಿದ್ದಾರೆ, ಹರಸಿದ್ದಾರೆ ಎಂದರು.

ನಮ್ಮ ಪಕ್ಷದಲ್ಲಿ ಹಲವು ಸಮರ್ಥ ಲಿಂಗಾಯತ ನಾಯಕರಿದ್ದಾರೆ. ಹಾಗೆಂದು ಅವರ ಹೆಸರುಗಳನ್ನು ನಾನು ಸಿಎಂ ಸ್ಥಾನಕ್ಕೆ ಪ್ರಸ್ತಾವಿಸುತ್ತಿಲ್ಲ. ನನಗೆ ಸಿಎಂ ಸ್ಥಾನ ಕೊಟ್ಟರೆ ಬೇಡ ಎನ್ನುವುದಿಲ್ಲ, ಮುಖ್ಯಮಂತ್ರಿ ಹುದ್ದೆ ಬೇಡ ಎಂದು ಯಾರು ಹೇಳುತ್ತಾರೆ ಎಂದು ಕೇಳಿದರು.

ಭ್ರಷ್ಟಾಚಾರರಹಿತ ಆಡಳಿತ ಕೊಡುವುದು ನಮ್ಮ ಪ್ರಮುಖ ಆದ್ಯತೆ, ಆರಂಭದಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಾ ಬಂದಿತ್ತು. ಈ ಬಾರಿ ಜಗದೀಶ್ ಶೆಟ್ಟರ್ ಸೇರ್ಪಡೆ ನಮಗೆ ಖಂಡಿತಾ ಸಹಾಯವಾಗಿದೆ ಎಂದರು.

ಲಿಂಗಾಯತವಾದ ಹಿಂದುತ್ವವಲ್ಲ: ಬಿಜೆಪಿಯ ಹಿಂದುತ್ವವಾದವನ್ನು ನಾವು ಒಪ್ಪುವುದಿಲ್ಲ. ನಾವು ಹಿಂದೂ ತತ್ವಗಳನ್ನು ಪಾಲಿಸುವವರಲ್ಲ, ಬಸವತತ್ವವನ್ನು ಪಾಲಿಸುವವರು. ನಾವು ಹಿಂದೂಗಳಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT