ರಾಜಕೀಯ

ಸಿದ್ದರಾಮಯ್ಯ ಸಿಎಂ ಆಗುತ್ತಿರುವುದು ಸಂತಸ, ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ: ಹೆಚ್.ಸಿ. ಮಹದೇವಪ್ಪ

Ramyashree GN

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಜ್ಜಾಗಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ದಲಿತ ಮುಖಂಡ ಹೆಚ್.ಸಿ. ಮಹದೇವಪ್ಪ ಅವರು ಬುಧವಾರ ತಿಳಿಸಿದ್ದಾರೆ.

ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ ಎಂದು ಸಿದ್ದರಾಮಯ್ಯ ಅವರ ಆಪ್ತರಾದ ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ನಡುವೆ ಎರಡು ಮತ್ತು ಮೂರು ವರ್ಷಗಳ ಅಧಿಕಾರ ಹಂಚಿಕೆಯ ಪ್ರಸ್ತಾಪವು ಕೇವಲ ಗಾಳಿ ಸುದ್ದಿಯಷ್ಟೇ ಎಂದಿದ್ದಾರೆ.

'ಸಿಎಂ ಸ್ಥಾನಕ್ಕೆ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದು, ಒಬ್ಬರನ್ನು ಮಾತ್ರ ಸಿಎಂ ಮಾಡಬಹುದಾಗಿದೆ. ಹೀಗಾಗಿ, ಎಲ್ಲ ಅಂಶಗಳನ್ನು ವಿಶ್ಲೇಷಿಸಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ' ಎಂದರು.

'ಸದ್ಯದ ರಾಜಕೀಯ ಸನ್ನಿವೇಶವನ್ನು ಕೂಲಂಕಷವಾಗಿ ವಿಶ್ಲೇಷಿಸಿದ ನಂತರ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಆಕಾಂಕ್ಷೆಯನ್ನು ಹೊಂದಿರುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಅವರ ಕ್ಲೀನ್ ಇಮೇಜ್ ಕಾಂಗ್ರೆಸ್ ಪಕ್ಷವನ್ನು ನಂಬಲು ಜನರಿಗೆ ಸಹಾಯ ಮಾಡಿದೆ' ಎಂದು ಅವರು ಹೇಳಿದರು.

SCROLL FOR NEXT