ಡಾ ಸುಧಾಕರ್-ಸಿದ್ದರಾಮಯ್ಯ 
ರಾಜಕೀಯ

2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಪ್ರಮುಖ ಕಾರಣ: ಡಾ ಸುಧಾಕರ್

2018ರಲ್ಲಿ ರಚನೆಯಾದ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರ್ಕಾರ 2019ರಲ್ಲಿ ಪತನವಾಗಿದ್ದು ಈಗ ಇತಿಹಾಸ. 2018ರಲ್ಲಿ 104 ಸೀಟು ಗೆದ್ದಿದ್ದ ಬಿಜೆಪಿ ಜೆಡಿಎಸ್-ಕಾಂಗ್ರೆಸ್ ನ 16 ಶಾಸಕರನ್ನು ಆಪರೇಷನ್ ಕಮಲ ಮೂಲಕ ಸೆಳೆದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚಿಸಿದರು. 

ಬೆಂಗಳೂರು: 2018ರಲ್ಲಿ ರಚನೆಯಾದ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರ್ಕಾರ 2019ರಲ್ಲಿ ಪತನವಾಗಿದ್ದು ಈಗ ಇತಿಹಾಸ. 2018ರಲ್ಲಿ 104 ಸೀಟು ಗೆದ್ದಿದ್ದ ಬಿಜೆಪಿ ಜೆಡಿಎಸ್-ಕಾಂಗ್ರೆಸ್ ನ 16 ಶಾಸಕರನ್ನು ಆಪರೇಷನ್ ಕಮಲ ಮೂಲಕ ಸೆಳೆದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚಿಸಿದರು. 

2019ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದ್ದ 16 ಶಾಸಕರ ಪೈಕಿ ಈ ಬಾರಿಯ ಚುನಾವಣೆಯಲ್ಲಿ 8 ಮಂದಿ ಸೋಲು ಕಂಡಿದ್ದಾರೆ. ಅಂದು ಆಪರೇಷನ್ ಕಮಲಕ್ಕೆ ಬಲಿಯಾದವರು, ಕಾಂಗ್ರೆಸ್ ಜೆಡಿಎಸ್ ಬಿಟ್ಟು ಬಂದವರಿಗೆ, ಪಕ್ಷಾಂತರ ಮಾಡುವವರಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಬಹುತೇಕ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. 

ಇದಕ್ಕೆ ಉತ್ತರ ಎಂಬಂತೆ ಮಾಜಿ ಆರೋಗ್ಯ ಸಚಿವ ಚಿಕ್ಕಬಳ್ಳಾಪುರದ ಡಾ ಸುಧಾಕರ್ ಟ್ವೀಟ್ ಮಾಡಿದ್ದಾರೆ. ನಾವು ಸುಮ್ಮನೆ ಕಾಂಗ್ರೆಸ್ ತೊರೆದು ಬಂದಿಲ್ಲ, ಅಂದು ಪಕ್ಷದಲ್ಲಿ ನಮ್ಮ ಅಸಹಾಯಕತೆ, ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು ಎಂದು ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯನವರು ಪ್ರಮುಖ ಕಾರಣ: ಇಲ್ಲಿ ಡಾ ಸುಧಾಕರ್ ತಾವು ಕಾಂಗ್ರೆಸ್ ತೊರೆದು ಬರುವಲ್ಲಿ ಸಿದ್ದರಾಮಯ್ಯನವರ ಪಾತ್ರ ಮುಖ್ಯವಾಗಿದೆ ಎಂಬ ಹೊಸ ಬಾಂಬ್ ಸಿಡಿಸಿದ್ದಾರೆ. 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿನವೂ ಕುಮಾರಸ್ವಾಮಿ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT