ಬಿ.ವೈ. ವಿಜಯೇಂದ್ರ 
ರಾಜಕೀಯ

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮುಖವಾಡ ಬಯಲಾಗಿದೆ: ಬಿ.ವೈ.ವಿಜಯೇಂದ್ರ

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್​ನ ಮುಖವಾಡ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ  ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು:  ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್​ನ ಮುಖವಾಡ  ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ  ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಅಧಿಕಾರದ ಲಾಭಕ್ಕಾಗಿ ಲಿಂಗಾಯತ ಹೆಸರನ್ನು ಬಳಸಿಕೊಂಡ ಕಾಂಗ್ರೆಸ್​ನ ನಾಯಕರು ಲಿಂಗಾಯತರಿಗೆ ಸಿಎಂ ಅಥವಾ ಡಿಸಿಎಂ ನೀಡಿ ಎಂಬ ಮಾತು ಕೇಳಿಬಂದಾಗ ಮೌನವಾಗಿದ್ದಾರೆ. 39 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರು ಸರಿಯಾದ ಸ್ಥಾನಕ್ಕಾಗಿ ಯಾವುದೇ ನಾಯಕ ತಮ್ಮ ಧ್ವನಿ ಎತ್ತದಿರುವುದು ವಿಪರ್ಯಾವಾಗಿದೆ. ಕಾಂಗ್ರೆಸ್​ನ ನಿಜ ಮುಖ ಬಯಲಾಗಿದೆ. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್​ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್​ ನ್ಯಾಯ ಒದಿಗಿಸಿಲ್ಲ ಎಂದು ಟೀಕಿಸಿದ್ದಾರೆ. 

ಅಣ್ಣ ಬಸವಣ್ಣ ಮತ್ತು ಅವರ ಬೋಧನೆಗಳನ್ನು ನಿಜವಾಗಿಯೂ ಪ್ರತಿನಿಧಿಸುವುದು ಬಿಜೆಪಿ ಮಾತ್ರ. ಬಸವಣ್ಣನವರ ತತ್ವವನ್ನು ಅನುಸರಿಸುವ ಮೂಲಕ ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಿದೆ. ಕಾಂಗ್ರೆಸ್‌ನ ಸುಳ್ಳಿನ ಭರವಸೆಗೆ ಬಿದ್ದಿರುವುದು ರಾಜ್ಯದ ಜನರು ಶೀಘ್ರದಲ್ಲಿಯೇ ಅರಿತುಕೊಳ್ಳಲಿದ್ದು ಭಾರತ ತಾಯಿಯಾಗಿ ಬಿಜೆಪಿ ಮತ್ತು ನರೇಂದ್ರ ಮದೋದಿ ಅವರೊಂದಿಗೆ ನಿಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!