ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆ, ರಬ್ಬರ್ ಸ್ಟಾಂಪ್ ಆಗಿದ್ದಾರೆ: ನಳಿನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮ್ಮ ಸಂಪುಟದಲ್ಲಿ ತಮ್ಮ ಆಯ್ಕೆಯ ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಕೂಡ ಅವರಿಗಿಲ್ಲ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮ್ಮ ಸಂಪುಟದಲ್ಲಿ ತಮ್ಮ ಆಯ್ಕೆಯ ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಕೂಡ ಅವರಿಗಿಲ್ಲ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರವನ್ನು ಪೋಸ್ಟ್ ಮಾಡಿದ ಕಟೀಲ್, ಹೊಸ ಮುಖ್ಯಮಂತ್ರಿ ಮೊದಲ ದಿನವೇ ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆಯಾಗಿದ್ದಾರೆ ಎಂದು ದೂರಿದ್ದಾರೆ.

ಪತ್ರದಲ್ಲಿ ವೇಣುಗೋಪಾಲ್ ಎಂಟು ಶಾಸಕರ ಪಟ್ಟಿಯನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಈ ಹೆಸರುಗಳನ್ನು ಸಂಪುಟ ಸಚಿವರನ್ನಾಗಿ ಅನುಮೋದಿಸಿದ್ದಾರೆ. ಸೂಕ್ತ ಕಾನೂನಿನ ನಿಬಂಧನೆಗಳ ಪ್ರಕಾರ ಈ ನಿರ್ಧಾರವನ್ನು ಕಾರ್ಯಗತಗೊಳಿಸುವಂತೆ ನೋಡಿಕೊಳ್ಳಲು ಈ ಮೂಲಕ ನಿಮ್ಮನ್ನು ವಿನಂತಿಸಲಾಗಿದೆ ಎಂದು ವೇಣುಗೋಪಾಲ್ ಪತ್ರದಲ್ಲಿ ಬರೆದಿದ್ದಾರೆ.

'ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಮಂತ್ರಿ ಮಾಡಬೇಕು ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ಸಿದ್ದರಾಮಯ್ಯನವರಿಗೆ ಇಲ್ಲ ಎನ್ನುವುದಕ್ಕೆ ಈ ಪತ್ರವೇ ಸಾಕ್ಷಿ. ಸಮಾಜವಾದಿ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಸಿದ್ದರಾಮಯ್ಯ ಅವರು ಮೊದಲ ದಿನದಿಂದಲೇ ತಾವು ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆಯಾಗಿದ್ದು, ರಬ್ಬರ್ ಸ್ಟಾಂಪ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಯಭೇರಿ ಬಾರಿಸಿ ಸರಿಯಾಗಿ ಒಂದು ವಾರದ ನಂತರ, ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಮತ್ತು ಎಂಟು ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT