ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್ ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ವಿಧಾನಸಭೆ ಸಭಾಧ್ಯಕ್ಷರ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆಗಿ ಆರ್. ವಿ. ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಮಾರಸ್ವಾಮಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಕುಮಾರಸ್ವಾಮಿ, ಮಾಜಿ  ಸಚಿವ ಹೆಚ್. ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ 19 ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದರು. ವಿಧಾನಮಂಡಲದಲ್ಲಿ ಜನಪರ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂದು ಎದೆಗುಂದದೆ, ತಳಮಟ್ಟದಲ್ಲಿ  ಸಂಘಟಿಸಬೇಕಾಗಿದೆ ಎಂದು ಚುನಾಯಿತ ಶಾಸಕರಿಗೆ ಕುಮಾರಸ್ವಾಮಿ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT