ಸಾಂದರ್ಭಿಕ ಚಿತ್ರ 
ರಾಜಕೀಯ

'ವಿಪಕ್ಷ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ: ಬಿಜೆಪಿಗೆ ಕಾಂಗ್ರೆಸ್ ಟಾಂಗ್

ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಬೆಂಗಳೂರು: ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್  ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ ಎಂದು ಹೇಳಿದೆ. ಇನ್ನೂ ರಾಜ್ಯ ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದೆ. 

ಬಿಜೆಪಿಯಲ್ಲಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಎಂದು ಕುಹಕವಾಡಿದ್ದು, ಸೋಲಿನ ಹೊಣೆ ಯಾರದ್ದು, ಅಮಿತ್ ಷಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು? ಎಂದು ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ