ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು. 
ರಾಜಕೀಯ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ; ರಾಜ್ಯದಲ್ಲಿ ಉತ್ತಮ ಆಡಳಿತದ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದು, ದಕ್ಷಿಣದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ ನಂತರ ಸೋನಿಯಾ ಗಾಂಧಿ ಅವರೊಂದಿಗಿನ ಅವರ ಮೊದಲ ಸಭೆ ಇದಾಗಿದೆ.

ಸಿದ್ದರಾಮಯ್ಯ ಅವರು ಸಿಪಿಪಿ ಅಧ್ಯಕ್ಷರಿಗೆ ರಾಜ್ಯದಲ್ಲಿ ಉತ್ತಮ ಆಡಳಿತದ ಭರವಸೆ ನೀಡಿದ್ದಾರೆ ಮತ್ತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರ ಮಾರ್ಗದರ್ಶನ ಮತ್ತು ಪ್ರಚಾರಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್‌ನ ಉನ್ನತ ನಾಯಕರು ಗುರುವಾರ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಕರ್ನಾಟಕ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಭಯ ನಾಯಕರು ಭೇಟಿ ಮಾಡಿದ್ದರು.

ಕರ್ನಾಟಕ ಸಂಪುಟಕ್ಕೆ ಸುಮಾರು 20 ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದು, ಅದು ಅಂತಿಮಗೊಳ್ಳುವ ಮೊದಲು ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು ಎಂದು ಹೇಳಿವೆ.

ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಮೊದಲ ಹಂತದಲ್ಲಿಯೇ ಸುಮಾರು 28 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಹಿಂದಿನ ಯೋಜನೆಗೆ ವಿರುದ್ಧವಾಗಿ ಎಂಟು ಸಚಿವರ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿತ್ತು. ಬಳಿಕ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.
ಕರ್ನಾಟಕದಲ್ಲಿ ಗರಿಷ್ಠ 34 ಮಂದಿ ಸಚಿವರಾಗಬಹುದಾಗಿದ್ದು, ಎಲ್ಲ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವುದು ಕಾಂಗ್ರೆಸ್‌ಗೆ ಕಷ್ಟವಾಗಲಿದೆ.

ಎಲ್ಲ ವರ್ಗಗಳನ್ನು ಪ್ರತಿನಿಧಿಸುವ ಮತ್ತು ಹಿರಿಯರಾಗಿರುವ ಶಾಸಕರ ಹೆಸರನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗಿದೆ ಮತ್ತು ಈ ಆಯ್ಕೆಯ ಬಗ್ಗೆ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT