ಸಿದ್ದು ಸಂಪುಟದ ನೂತನ ಸಚಿವರು 
ರಾಜಕೀಯ

ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿದ್ದುಗೆ ಹಣಕಾಸು, ಡಿಕೆಶಿಗೆ ಜಲಸಂಪನ್ಮೂಲ, ಪರಂಗೆ ಗೃಹ ಇಲಾಖೆ ಸಾಧ್ಯತೆ

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ, ಈ ಕುರಿತು ಅಧಿಕೃತ ಮಾಹಿತಿ ಹೊರಬಂದಿಲ್ಲ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಳ್ಳಲಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ದೊರೆಯುವ ಸಾಧ್ಯತೆಯಿದೆ.

ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ, ಈ ಕುರಿತು ಅಧಿಕೃತ ಮಾಹಿತಿ ಹೊರಬಂದಿಲ್ಲ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಳ್ಳಲಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ದೊರೆಯುವ ಸಾಧ್ಯತೆಯಿದೆ.

ಉಳಿದಂತೆ ಇತರ ಸಚಿವರ ಸಂಭಾವ್ಯ ಖಾತೆಗಳ ವಿವರ ಇಂತಿದೆ:

ಡಾ. ಜಿ. ಪರಮೇಶ್ವರ್- ಗೃಹ, ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ,
ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ,
ಕೆ. ಜೆ ಜಾರ್ಜ್ - ಇಂಧನ,
ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ,
ರಾಮಲಿಂಗಾರೆಡ್ಡಿ- ಸಾರಿಗೆ,
ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ,
ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್,
ಜಮೀರ್ ಅಹ್ಮದ್- ವಸತಿ, ವಕ್ಫ್  ಮತ್ತು ಅಲ್ಪಸಂಖ್ಯಾತ ಕಲ್ಯಾಣ,
ಕೃಷ್ಣ ಬೈರೇಗೌಡ- ಕಂದಾಯ,
ದಿನೇಶ್ ಗುಂಡೂರಾವ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ,
ಚಲುವರಾಯ ಸ್ವಾಮಿ- ಕೃಷಿ,
ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ,
ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ,
ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ,
ಎನ್ ರಾಜಣ್ಣ- ಸಹಕಾರ,
ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು,
ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ,
ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ,
ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ,
ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,
ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ,
ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ,
ಲಕ್ಷ್ಮಿ ಹೆಬ್ಬಾಳ್ ಕರ್ - ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
ರಹೀಂಖಾನ್- ಪೌರಾಡಳಿತ ಮತ್ತು ಹಜ್,
ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ, 
ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ,
ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ,
ಬೈರತಿ ಸುರೇಶ್- ನಗರಾಭಿವೃದ್ಧಿ, ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,
ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ,
ಕೆ.ಎನ್ ರಾಜಣ್ಣ- ಸಹಕಾರ,
ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ,
ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ

ಈ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿತ್ತು. ಆದರೆ, ಅದರಲ್ಲಿ ಕೆಲವೊಂದು ಲೋಪ ದೋಷಗಳು  ಕಂಡುಬಂದ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿದೆ ಎನ್ನಲಾಗಿದೆ. 

ಸಂಪುಟ ಸಚಿವರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರ ಅಥವಾ ಭಾನುವಾರ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT