ರಾಜಣ್ಣ ಮತ್ತು ಪರಮೇಶ್ವರ್ 
ರಾಜಕೀಯ

ಸಿದ್ದರಾಮಯ್ಯಗೆ ಬೇಡ ಎಂದರೆ ಪರಮೇಶ್ವರ ಮುಖ್ಯಮಂತ್ರಿ ಆಗಲಿ; ನಾನು ಯಾರಿಗೂ ಹೆದರಲ್ಲ, ಎಐಸಿಸಿಗೂ ಕೂಡ: ರಾಜಣ್ಣ

ಹಾಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಸಿಎಂ ಆಗಿ ಇರುವವರೆಗೆ ನಾವೆಲ್ಲ ಸಿದ್ದರಾಮಯ್ಯ ಪರ.‌ ಸಿದ್ದರಾಮಯ್ಯ ಹೊರತು ಪಡಿಸಿದರೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ಬಯಸುತ್ತೇವೆ.

ತುಮಕೂರು: ಹಾಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಸಿಎಂ ಆಗಿ ಇರುವವರೆಗೆ ನಾವೆಲ್ಲ ಸಿದ್ದರಾಮಯ್ಯ ಪರ.‌ ಸಿದ್ದರಾಮಯ್ಯ ಹೊರತು ಪಡಿಸಿದರೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.

ನೂತನ ಪೊಲೀಸ್ ಸಮುಚ್ಛಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಇದ್ದಾರೆ. ಮುಂದಿನ ದಿನಗಳಲ್ಲಿ ಅವರು ಏನು ಬೇಕಾದರೂ ಆಗಬಹುದು. ಡಾಕ್ಟರೇ ನಿಮಗೆ ಅದೃಷ್ಟ ಇದೆ, ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗುತ್ತಾರೆ ಅಂತಾದರೆ ನಾವೆಲ್ಲ ಸಂತೋಷ ಪಡುತ್ತೇವೆ. ನಾವೆಲ್ಲ ಮುಖ್ಯಮಂತ್ರಿ ಆದಂತೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಗಾದಿಯಲ್ಲಿ ಇರುವವರೆಗೆ ನಾವೆಲ್ಲರೂ ಸಿದ್ದರಾಮಯ್ಯ ಪರ. ಇರುತ್ತೇವೆ. ಅಂದರೆ, ಪರಮೇಶ್ವರ್ ಆದಿಯಾಗಿ ನಾವೆಲ್ಲರೂ ಸಿದ್ದರಾಮಯ್ಯ ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ.

ಎಐಸಿಸಿಯವರು ನಮಗೆ ಹೇಳಿದ್ದಾರೆ ಏನು ಮಾತನಾಡಬಾರದು ಅಂತ. ಆದರೆ, ನಾನು ಮತ್ತು ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು.‌ ಹಾಗಾಗಿ ನನ್ನ ಮನಸಿನ ಭಾವನೆಯನ್ನು ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಎಐಸಿಸಿಗೂ ಕೂಡ ಎಂದು ಕೆ.ಎನ್.‌ ರಾಜಣ್ಣ ಹೇಳಿದರು.

ನಾಯಕತ್ವ ಬದಲಾವಣೆ, ಸರ್ಕಾರದ ವಿಚಾರದಲ್ಲಿ ಏನೂ ಮಾತನಾಡಬಾರದು ಎಂದು ಎಐಸಿಸಿ ಮುಖಂಡರು ಹೇಳಿದ್ದಾರೆ. ನಾನು, ಇಂತಹ ಯಾವ ಸೂಚನೆಗೂ ಅಂಜುವವನಲ್ಲ. ಈಗ ಮಾತನಾಡಿದ್ದೇನೆ, ಮುಂದೆ ಮಾತನಾಡುವುದಿಲ್ಲ ಎಂದು ಹೇಳುತ್ತೇನೆ. ಏನೂ ಬೇಕಾದರೂ ಮಾಡಿಕೊಳ್ಳಲಿ. ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ’ ಎಂದು ಹೈಕಮಾಂಡ್ ವಿರುದ್ಧ ಗುಡುಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT