ಶಾಸಕ ಇಕ್ಬಾಲ್ ಹುಸೇನ್ 
ರಾಜಕೀಯ

ಇನ್ನು ಒಂದೂವರೆ ವರ್ಷ ನಂತರ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ

ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆಯಾಗಿದೆ. ಕೇವಲ ನಮ್ಮ ಜಿಲ್ಲೆಯವರದ್ದು ಮಾತ್ರವಲ್ಲ, ರಾಜ್ಯದ 224 ಕ್ಷೇತ್ರಗಳ ಜನರೂ ಅದನ್ನೇ ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಹೆಚ್ ಎ ಇಕ್ಬಾಲ್ ಹೇಳಿದ್ದಾರೆ.

ರಾಮನಗರ: ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆಯಾಗಿದೆ. ಕೇವಲ ನಮ್ಮ ಜಿಲ್ಲೆಯವರದ್ದು ಮಾತ್ರವಲ್ಲ, ರಾಜ್ಯದ 224 ಕ್ಷೇತ್ರಗಳ ಜನರೂ ಅದನ್ನೇ ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಹೆಚ್ ಎ ಇಕ್ಬಾಲ್ ಹೇಳಿದ್ದಾರೆ.

ಮುಂದಿನ 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರು, ತಳಮಟ್ಟದಿಂದ ಪಕ್ಷವನ್ನು ಬೆಳೆಸಿ ಕಾರ್ಯಕರ್ತರಿಗೆ ಶಕ್ತಿ ಕೊಟ್ಟು ಉಳಿಸಿದ್ದಾರೆ. ತನ್ನೆಲ್ಲಾ ಶಕ್ತಿ ಮೀರಿ ಕೆಲಸ ಮಾಡಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದರು.

ನಮ್ಮ ನಾಯಕರಾದ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳಿವೆ. ಎಲ್ಲರಿಗೂ ಅವಕಾಶ ಸಿಗಬೇಕು. ಅವರಿಗೂ ಒಂದು ಅವಕಾಶ ನೀಡಬೇಕು ಎಂದು ಸಾಕಷ್ಟು ನಾಯಕರು ಮತ್ತು ಕಾರ್ಯಕರ್ತರು ಆಸೆ ಇಟ್ಟುಕೊಂಡಿದ್ದಾರೆ. ಅವರನ್ನು ಸಿಎಂ ಆಗಿ ನೋಡುವುದು ನಮ್ಮ ಕನಸು. ಇನ್ನು ಒಂದೂವರೆ ವರ್ಷದಲ್ಲಿ ಅವರು ಸಿಎಂ ಆಗುತ್ತಾರೆ. ಇದು ನಮ್ಮೆಲ್ಲರ ಅಭಿಲಾಷೆ ಕೂಡ ಎಂದರು.

ಸಿದ್ದರಾಮಯ್ಯ ನಮ್ಮ ನಾಯಕ: ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಕಳೆದ ಸಲ ಸಿಎಂ ಆಗಿದ್ದ ಅವರು ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದರು. ಜನಪರ ಮತ್ತು ಬಡವರ ಪರ ಕೆಲಸ ಮಾಡಿದ್ದಾರೆ ಎಂದರು.

ಕೆಲಸಕ್ಕೆ ಬಾರದವರು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು ಶಾಸಕರ ಬಗ್ಗೆ ಹಗುರವಾಗಿ ಮಾತನಾಡಬಾರದು. ಎಲ್ಲರಿಗೂ ಅವರದ್ದೇ ಆದ ಗೌರವವಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT