ರಾಜಕೀಯ

ಕಾಂಗ್ರೆಸ್ ನಾಯಕರ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ, ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಾರೆ: ಸಚಿವ ಕೆ ಎನ್ ರಾಜಣ್ಣ

Sumana Upadhyaya

ಹಾಸನ: 2024ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೇಳುವ ಸಾಧ್ಯತೆಯ ಸುಳಿವು ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸದ್ಯಕ್ಕೆ ಪಕ್ಷದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ, ಅವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಸಿಎಂ ಅಥವಾ ಡಿಸಿಎಂ ಅವರ ಪರ ಅಥವಾ ವಿರುದ್ಧವಾಗಿ ಶಾಸಕರು ಒಲವು ತೋರದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಶಾಸಕರಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ವೇಣುಗೋಪಾಲ್ ಮತ್ತು ಸುರ್ಜೇವಾಲಾ ಬೆಂಗಳೂರಿನಲ್ಲಿದ್ದು, ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿ ಮಾಡಿ 2024ರ ಲೋಕಸಭೆ ಚುನಾವಣೆಗೆ ಚರ್ಚಿಸಲು ಮತ್ತು ಕಾರ್ಯತಂತ್ರ ರೂಪಿಸಲು ನಿರ್ಧರಿಸಿದರು. 2024ರ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳನ್ನು ತಳ್ಳಿ ಹಾಕಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೆ ಪಕ್ಷದ ಹೈಕಮಾಂಡ್ ಬಗೆಹರಿಸಲಿದೆ ಎಂದರು. ಮುಂದಿನ ವರ್ಷ ಚುನಾವಣೆ. ಮುಂಬರುವ ಬಿಬಿಎಂಪಿ ಚುನಾವಣೆ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿದ್ದು, ಪಾಲಿಕೆಯನ್ನು ಮೂರು ವಿಭಾಗ ಮಾಡಲು ಚಿಂತನೆ ನಡೆಸಿದೆ ಎಂದರು.

SCROLL FOR NEXT