ಎಸ್.ಐ. ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆ 
ರಾಜಕೀಯ

ಮಾಜಿ ಶಾಸಕ, ಬಿಎಸ್‌ವೈ ಸಂಬಂಧಿ ಎಸ್.ಐ. ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆ

ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು. ಚಿಕ್ಕನಗೌಡರ ಅವರೊಂದಿಗೆ ಶಿಗ್ಗಾವಿಯ ಬಿಜೆಪಿಯ ಕೆಲವು ಮುಖಂಡರು ಸಹ ಕಾಂಗ್ರೆಸ್ ಸೇರಿದರು.

ಚಿಕ್ಕನಗೌಡರ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ಬಳಿಕ ಸೈಲೆಂಟ್​ ಆಗಿದ್ದ ಅವರು ಕಳೆದ ಕೆಲ ದಿನಗಳ ಹಿಂದೆ ತಾವು ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಹೇಳಿದ್ದರು.

ಎರಡು ವಾರಗಳ ಹಿಂದಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್​​ಗೆ ಸೇರ್ಪಡೆಯಾಗಿದ್ದರು. ಇದಕ್ಕೂ ಮುನ್ನ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT