ಬಿ.ವೈ. ವಿಜಯೇಂದ್ರ 
ರಾಜಕೀಯ

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!

ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಹೆಸರುಗಳು ಕೇಳಿಬರುತಿತ್ತು.

ಆದರೆ, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರೂ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಪ್ರಭಾವವನ್ನು ಮನಗಂಡ ಹೈಕಮಾಂಡ್ , ಕೊನೆಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ವೋಟ್ ಬ್ಯಾಂಕಿನತ್ತ ಗಮನ ಕೇಂದ್ರೀಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?