ಕಾಂಗ್ರೆಸ್ ಸೇರ್ಪಡೆಯಾದ ಗೌರಿ ಶಂಕರ್ 
ರಾಜಕೀಯ

ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ!

ತುಮಕೂರು ಜಿಲ್ಲೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮತ್ತು ಬೆಂಗಳೂರು ದಾಸರಹಳ್ಳಿಯ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್‌ ತೊರೆದು  ಕಾಂಗ್ರೆಸ್ ಸೇರಿದ್ದಾರೆ.

ಬೆಂಗಳೂರು:  ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್​, ಗೌರಿ ಶಂಕರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್​, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ

ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು.

ಡಿ.ಸಿ. ಗೌರಿಶಂಕರ್‌ ಅವರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕುಣಿಗಲ್‌ ಶಾಸಕ ಡಾ. ರಂಗನಾಥ್‌ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಇವರಿಗೆ ಗೃಹ ಸಚಿವ ಪರಮೇಶ್ವರ್‌ ಅವರ ಬೆಂಬಲವೂ ಇತ್ತು. ಆದರೆ, ಸಹಕಾರ ಸಚಿವರಾಗಿರುವ ಕೆ.ಎನ್‌. ರಾಜಣ್ಣ ಅವರು ಡಿ.ಸಿ. ಗೌರಿಶಂಕರ್‌ ಅವರ ಪಕ್ಷ ಸೇರ್ಪಡೆಯ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದಿದ್ದರು.

ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ಜೆಡಿಎಸ್‌ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್