ವಿಜಯೇಂದ್ರ 
ರಾಜಕೀಯ

ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ: ಬಿ.ವೈ.ವಿಜಯೇಂದ್ರ

ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಬಿಜೆಪಿ ಶಾಸಕಾಂಗ ಪಕ್ಚದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ವೀಕ್ಷಕರಾಗಿ ಯಾರು ಬರುತ್ತಾರೆ ಎಂಬುದು ನಾಳೆ ಗೊತ್ತಾಗುತ್ತದೆ ಎಂದರು.

ಸಮಾವೇಶದ ಬಗ್ಗೆ ಹಿರಿಯರ ಜೊತೆ ಚರ್ಚಿಸಿದ ನಂತರ ತೀರ್ಮಾನ ಮಾಡಲಾಗುವುದು. ಇನ್ನು ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ. ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷ ನಾಯಕನನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದರು.

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಕಸರತ್ತು ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌,  ಡಾ. ಸಿ.ಎನ್‌.ಅಶ್ವತ್ಥ ನಾರಾಯಣ್‌, ಹಾಗೂ ಆರ್‌ ಅಶೋಕ್‌ ಅವರು ರೇಸ್ ನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT