ಬಿ.ವೈ ವಿಜಯೇಂದ್ರ 
ರಾಜಕೀಯ

ಜನಸೇವಾ ವಿದ್ಯಾಕೇಂದ್ರ ಶಾಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ: ಹಳೇಯ ನೆನಪು ಸ್ಮರಿಸಿದ ವಿಜಯೇಂದ್ರ!

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಬುಧವಾರ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರ ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ  ಭಾಗವಹಿಸಿದ್ದರು.

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಬುಧವಾರ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರ ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ  ಭಾಗವಹಿಸಿದ್ದರು.

8ರಿಂದ 10ನೇ ತರಗತಿವರೆಗೆ ಜನಸಂಘ ವಿದ್ಯಾಶಾಲೆಯಲ್ಲಿ ವ್ಯಾಸಂಗ ಮಾಡಿದ ಅವರು, ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಆ ಮೂರು ವರ್ಷಗಳಲ್ಲಿ 19 ಮಂದಿಯೊಂದಿಗೆ ವಾಸವಾಗಿದ್ದ ವಸತಿ ನಿಲಯದ ಕಟ್ಟಡ ಈಗ ಇಲ್ಲ. ಅದನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸಲಾಗಿದೆ.

ವಿಜಯೇಂದ್ರ ಶಾಲೆಗೆ ಭೇಟಿ ನೀಡಿದಾಗ ಹಲವು ಸಿಬ್ಬಂದಿ ಹಾಜರಿದ್ದರು. 70 ವರ್ಷದ ರಾಮಚಂದ್ರ ಭಟ್ ಕೋಟೆಮನೆ ಅಂದು ಅವರ ಗುರುಗಳಾಗಿದ್ದರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರ ನೂತನ ನೇಮಕಕ್ಕೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ  ಸುಮಾರು 50 ಹಾಸ್ಟೆಲ್ ಸ್ನೇಹಿತರು ಉಪಸ್ಥಿತರಿದ್ದರು, ವಿಜಯೇಂದ್ರ ಮಾತನಾಡಲು ವೇದಿಕೆ ಏರಿದಾಗ ಅವರನ್ನು ಹುರಿದುಂಬಿಸಿದರು. ವಿಜಯೇಂದ್ರ ಅವರು ತಮ್ಮ ಶಾಲೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಇಂದು ತಾವು ಅನುಭವಿಸುತ್ತಿರುವ  ಎಲ್ ಹುದ್ದೆ ಪದವಿಗಳಿಗೆ ಕೂ ತಮ್ಮ ಶಾಲೆಯೇ ಕಾರಣ ಎಂದು ಹೇಳಿ ಅಲ್ಲಿನ ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಪಕ್ಷ ಕಟ್ಟಿ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರ ಕೆಲವು ಸ್ನೇಹಿತರು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮರುನಿರ್ಮಾಣ ಮಾಡಲು ವಿಜಯೇಂದ್ರ ಅವರ ಪ್ರಯತ್ನಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ವಿಜಯೇಂದ್ರ ಇಲ್ಲಿ ವಿದ್ಯಾರ್ಥಿಯಾಗಿದ್ದ. ಆ ದಿನಗಳಲ್ಲಿ ಕೇವಲ ಶಾಸಕರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ರೇಡ್ ಮಾರ್ಕ್ ಬಿಳಿ ಸಫಾರಿ ಸೂಟ್‌ನಲ್ಲಿ ಬಸ್ ಅಥವಾ ಇತರ ವಾಹನಗಳಲ್ಲಿ ವಿಜಯೇಂದ್ರ ಮತ್ತು ಶಿವಮೊಗ್ಗ ಸಂಸದ ರಾಘವೇಂದ್ರ ಅವರನ್ನು ಡ್ರಾಪ್ ಮಾಡಲು ಹಾಗೂ ರಜೆಯ ಸಮಯದಲ್ಲಿ ಮನೆಗೆ ಕರೆದುಕೊಂಡು ಹೋಗಲು ಬರುತ್ತಿದ್ದರು ಎಂದು ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದೆ.

ಈ ವರ್ಷದ ಮೇನಲ್ಲಿ ವಿಜಯೇಂದ್ರ ಅವರು ಶಾಲೆಗೆ ಭೇಟಿ ನೀಡಿದಾಗ ಅವರೊಂದಿಗೆ ನಡೆಸಿದ ಸಂವಾದವನ್ನು ಸಿಬ್ಬಂದಿ ಸದಸ್ಯರು ನೆನಪಿಸಿಕೊಂಡರು. ಶಾಲೆಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಿದ್ದರು. ತಮ್ಮ ನಾಯಕತ್ವ ಕೌಶಲ್ಯಕ್ಕೆ ಮತ್ತಷ್ಟು ಮೆರುಗು ನೀಡಲು ಶಾಲೆ ಸಹಕಾರಿಯಾಗಿದೆ ಎಂದರು. ವಿಜಯೇಂದ್ರ ಇಲ್ಲಿ ವಿದ್ಯಾರ್ಥಿಯಾಗಿ ಅನೇಕ ನಾಯಕತ್ವ ಸ್ಥಾನಗಳನ್ನು ಹೊಂದಿದ್ದರು ಎಂದು ಅವರು ಹೇಳಿದರು.

ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿವೈ ವಿಜಯೇಂದ್ರ ಅವರು ಬುಧವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.

ಮಾಜಿ ಡಿಸಿಎಂ ಗೋವಿಂದ್ ಕಾರಜೋಳ, ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ವಿಜಯೇಂದ್ರ ಜತೆಗಿದ್ದರು. ವಿಶೇಷವೆಂದರೆ, ವಿಜಯೇಂದ್ರ ಅವರ ಹಿರಿಯ ಸಹೋದರ ಹಾಗೂ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT