ಶಾಸಕ ಬಸನಗೌಡ ಪಾಟೀಲ ಯತ್ನಾಳ್ 
ರಾಜಕೀಯ

ಹೇ ಪ್ರಭು! ಚಹಾ ಮಾರಿಕೊಂಡು ಆದರೂ ಬದುಕಬಹುದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಯತ್ನಾಳ್ ಹೇಳಿದ್ದು ಯಾರಿಗೆ?

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾರ್ಮಿಕವಾಗಿ ಫೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾರ್ಮಿಕವಾಗಿ ಫೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ. 

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ!! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! "ಜಾರಿದವರ ಯತ್ನ ಬೆಲ್ಲ" ಆಗ್ಲಿಲ್ಲವಲ್ಲಪ್ಪ ಎಂಬ ಕಾಂಗ್ರೆಸ್ ಫೋಸ್ಟ್ ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಹೇ ಪ್ರಭು! ಚಹಾ ಮಾರಿಕೊಂಡು ಆದರೂ ಬದುಕಬಹದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ಆರೋಪಿಸಿದ ಆ ವಿವೇಕಾನಂದ ಬೇರೆ, "ಹಲೋ ಅಪ್ಪ" ವಿವೇಕಾನಂದ ಬೇರೆ! ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ ಎಂದು  ಪೋಸ್ಟ್ ಮಾಡಿದ್ದಾರೆ. ಇದು ಸಿದ್ದರಾಮಯ್ಯ ಅವರನ್ನು ಸಮರ್ಥನೆಯ ಹೇಳಿಕೆಯೋ ಅಥವಾ ಟೀಕೆಯೋ ಗೊತ್ತಿಲ್ಲ. ಇದಕ್ಕೂ ಮುನ್ನ ನ ದೈನ್ಯಂ, ನ ಪಲಾಯನಂ, ಯೋಧ ಎಂದಿಗೂ ದೂರಲಾರ ಅಥವಾ ವಿಷಾದ ವ್ಯಕ್ತಪಡಿಸಲಾರ ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ