ವಿಶ್ವಾಸ್ ವೈದ್ಯ, 
ರಾಜಕೀಯ

ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸವದತ್ತಿ ಶಾಸಕ

ಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅಣ್ಣಾ ಮುಖ್ಯಮಂತ್ರಿ ಆಗುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಬಗ್ಗೆ ಗುಸು ಗುಸು ಮತ್ತು ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ. ಅವಕಾಶ ಸಿಕ್ಕಾಗಲೆಲ್ಲ ತಮ್ಮ ನಾಯಕರಿಗೆ ಕಾಂಗ್ರೆಸ್‌ ಶಾಸಕರು ಸಿಎಂ ಸ್ಥಾನದ ಜೈಕಾರ ಹಾಕುತ್ತಲೇ ಇರುತ್ತಾರೆ. ಇದೀಗ ಮತ್ತೊಬ್ಬ ಕಾಂಗ್ರೆಸ್‌ ಶಾಸಕ ಕೂಡ ಸಿಎಂ ಸ್ಥಾನದ ಬಗ್ಗೆ ಮಾತನಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್‌ ಶಾಸಕ ವಿಶ್ವಾಸ್ ವೈದ್ಯ, ಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅಣ್ಣಾ ಮುಖ್ಯಮಂತ್ರಿ ಆಗುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ಸಿಎಂ ವಿಚಾರದ ಬಗ್ಗೆ ಯಾರು ಕೂಡಾ ಮಾತನಾಡಬಾರದು ಎಂದು ಆದೇಶಿಸಿದ್ದರೂ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದಿದ್ದಾರೆ.

ಈ ಭಾಗದ ನಾಯಕ, ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತು. ಬೇರೆ ಕೆಲಸದಿಂದ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದು ಕಾರ್ಯಕ್ರಮಕ್ಕೆ ಹೋಗುವಂತೆ ಕರೆ ಮಾಡಿದ್ದರು ಎಂದ ವಿಶ್ವಾಸ್ ವೈದ್ಯ, ಈ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿ ಸತೀಶ್ ಅಣ್ಣಾ ಜಾರಕಿಹೊಳಿ ಹೊರ ಹೊಮ್ಮುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿರುವ ಸತೀಶ್ ಅಣ್ಣಾ ಜಾರಕಿಹೊಳಿ ಅಣ್ಣಾಗೆ ಹೆಚ್ಚಿನ ಶಕ್ತಿಯನ್ನ ಕೊಟ್ಟು ಕರ್ನಾಟಕದ ಮುಖ್ಯಮಂತ್ರಿಯಾಗಿ ನೋಡಬೇಕು ಅಂತಾ ಹೇಳ್ತಿದ್ದಾರೆ. ಅದು ನೂರಕ್ಕೆ ನೂರರಷ್ಟು ಸತ್ಯ. ಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಮುಂದಿನ ದಿನಗಳಲ್ಲಿ ಈ ಬೆಳಗಾವಿ ಗಡಿ ಭಾಗದಿಂದ ಸತೀಶ್ ಜಾರಕಿಹೊಳಿ ಅಣ್ಣ ಮುಖ್ಯಮಂತ್ರಿ ಆಗುವುದು ಅಷ್ಟೇ ಸತ್ಯ ಎಂದರು.

ಇದೀಗ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಧಿಕಾರ ಹಂಚಿಕೆಯಾದರೆ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ರೇಸ್‌ನಲ್ಲಿ ಇರುತ್ತೇನೆ ಎಂಬ ಸಂದೇಶವನ್ನು ತಮ್ಮ ಆಪ್ತ ಶಾಸಕರ ಮೂಲಕ ಸತೀಶ್ ಜಾರಕಿಹೊಳಿ ರವಾನೆ ಮಾಡಿದ್ದಾರೆ ಎನ್ನುವ ಗುಸುಗುಸು ಚರ್ಚೆಗಳು ನಡೆದಿವೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್