ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 
ರಾಜಕೀಯ

ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿತು: ಇನ್ನು ಲಿಂಗಾಯತ ಮುಖಂಡರ ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಹುದೊಡ್ಡ ಟಾಸ್ಕ್ ವಿಜಯೇಂದ್ರಗೆ!

ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರಿಗೆ ವೀರಶೈವ ಲಿಂಗಾಯತ ಸಮುದಾಯದ ವಿವಿಧ ಬಣಗಳ ನಾಯಕರನ್ನು ಒಟ್ಟಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಬಹಳ ದೊಡ್ಡ ಸವಾಲು ಸದ್ಯಕ್ಕೆ ಇದೆ.

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರಿಗೆ ವೀರಶೈವ ಲಿಂಗಾಯತ ಸಮುದಾಯದ ವಿವಿಧ ಬಣಗಳ ನಾಯಕರನ್ನು ಒಟ್ಟಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಬಹಳ ದೊಡ್ಡ ಸವಾಲು ಸದ್ಯಕ್ಕೆ ಇದೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ಪ್ರಮುಖವಾಗಿ ವಿರೋಧ ವ್ಯಕ್ತಪಡಿಸಿದವರು ಉತ್ತರ ಕರ್ನಾಟಕ ಮೂಲದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಯತ್ನಾಳ್ ಅವರು ಪಂಚಮಸಾಲಿ ವರ್ಗಕ್ಕೆ ಸೇರಿದವರು. ಮಾಜಿ ಸಚಿವ ವಿ ಸೋಮಣ್ಣ ಅವರು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿದಾಗ ಸಿಡಿದೆದ್ದ ಯತ್ನಾಳ್ ಉತ್ತರ ಕರ್ನಾಟಕದವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದರು.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರು ಇತ್ತೀಚೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರಾಗಿ ಬೆಂಗಳೂರಿಗೆ ಬಂದಿದ್ದ ವೇಳೆ ಯತ್ನಾಳ್, ವಿಜಯೇಂದ್ರ ಅವರು ನನ್ನ ಬಳಿಗೆ ಬರುವ ಅಗತ್ಯವಿಲ್ಲ. ಅವರು ರಾಜ್ಯಾಧ್ಯಕ್ಷನಾಗಲು ನಾನು ಬಯಸುವುದಿಲ್ಲ. ಕರ್ನಾಟಕದಲ್ಲಿ ಹೊಂದಾಣಿಕೆ ರಾಜಕೀಯದ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹೇಳಿದ್ದರು. 

ಯತ್ನಾಳ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ರಾಜ್ಯ ಘಟಕದ ನಾಯಕರು ನೀಡಿದ ಸಲಹೆಗಳನ್ನು ಪರಿಗಣಿಸಿ ಹೈಕಮಾಂಡ್ ನನ್ನ ನೇಮಕವನ್ನು ನಿರ್ಧರಿಸಿದೆ. ಯತ್ನಾಳ್‌ ಅವರು ಸ್ವಲ್ಪ ನೋವಿನಿಂದ ಹೇಳಿರಬಹುದು. ಅವರು ಕೆಲವು ಸಮಸ್ಯೆಗಳನ್ನು ಕೇಂದ್ರ ನಾಯಕರ ಗಮನಕ್ಕೆ ತಂದಿರಬಹುದು. ಒಟ್ಟಾಗಿ ಕುಳಿತು ಬಗೆಹರಿಸಿಕೊಳ್ಳುತ್ತೇವೆ ಎಂದು ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮೊನ್ನೆ ಭಾನುವಾರ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದ್ದರು. ಈ ಬಗ್ಗೆ ವಿ ಸೋಮಣ್ಣ ಅವರು ವಿಜಯೇಂದ್ರ ನೇಮಕದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ, ಕಾಲ ಎಲ್ಲವನ್ನೂ ನಿರ್ಧರಿಸುತ್ತದೆ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ. 

ಇನ್ನು ತಮ್ಮ ಶಕ್ತಿ ಪ್ರದರ್ಶನವೆಂಬಂತೆ ಸೋಮಣ್ಣ ಅವರು ಡಿಸೆಂಬರ್ ಮೊದಲ ವಾರದಲ್ಲಿ ವಿಜಯೇಂದ್ರ ಅವರನ್ನು ಆಹ್ವಾನಿಸದೆ ತುಮಕೂರಿನ ಪ್ರಮುಖ ಲಿಂಗಾಯತ ಮಠವಾದ ಸಿದ್ದಗಂಗಾ ಮಠದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ವಿಜಯೇಂದ್ರ ಅವರು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ 115 ನೇ ಜನ್ಮದಿನದ ಅಂಗವಾಗಿ ರ್ಯಾಲಿಯನ್ನು ಆಯೋಜಿಸಿದ್ದರು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಸೋಮಣ್ಣ ಅವರನ್ನು ಕಡೆಗಣಿಸಿ ಸಮುದಾಯದ ನಾಯಕನಾಗಿ ತನ್ನನ್ನು ತಾನು ಸ್ಥಾಪಿಸಿಕೊಳ್ಳಲು ವಿಜಯೇಂದ್ರ ಅವರು ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಗಳಿಸಲು ಅದು ಕೂಡ ಪ್ರಮುಖ ಅಂಶವಾಗಿದ್ದಿರಬಹುದು. ಈ ಮೂಲಕ ವೀರಶೈವ ಲಿಂಗಾಯತ ಸಮುದಾಯ ತಮ್ಮ ಜೊತೆಗಿದೆ ಎಂಬ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬುದು ಕೆಲ ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ. 

ವಿಜಯೇಂದ್ರ ಆಯೋಜಿಸಿದ್ದ ರ‍್ಯಾಲಿಯಲ್ಲಿ ಪಾಲ್ಗೊಳ್ಳದಂತೆ ಸೋಮಣ್ಣ ಅವರು ಅಂದು ಮನವಿ ಮಾಡಿಕೊಂಡಿದ್ದರೂ ಸಮುದಾಯದ ಹಲವು ಸ್ವಾಮೀಜಿಗಳು ಪಾಲ್ಗೊಂಡಿದ್ದರು. ವಿಜಯೇಂದ್ರ ಅವರು ರಾಜ್ಯ ಘಟಕದ ಅಧ್ಯಕ್ಷರಾದ ಕೂಡಲೇ ಸಮುದಾಯದ ಬಹುತೇಕ ಮಠಾಧೀಶರನ್ನು ಭೇಟಿ ಮಾಡಿದರು. 

ಈ ಸಂದರ್ಭದಲ್ಲಿ ತುಮಕೂರು ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಸೇರಿದಂತೆ ಕೆಲ ಮುಖಂಡರು ಸೋಮಣ್ಣ ಅವರ ಜೊತೆಗಿದ್ದಾರೆ. ವಿಜಯೇಂದ್ರ ಅವರು ಇತ್ತೀಚೆಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದಾಗ ಸೋಮಣ್ಣ ಅವರ ಜೊತೆ ಮತ್ತೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು ಬಸವರಾಜು ಅವರ ನೆರವು ಕೋರಿದ್ದರು ಎಂದು ಮೂಲಗಳು ಹೇಳುತ್ತವೆ. 

ಆದರೆ, ಬಿಎಸ್ ಯಡಿಯೂರಪ್ಪ ಅವರಂತೆ ವಿಜಯೇಂದ್ರ ಅವರನ್ನು ಏಕೆ ತಮ್ಮ ನಾಯಕನನ್ನಾಗಿ ಒಪ್ಪಿಕೊಳ್ಳಬೇಕು ಎಂಬುದು ಸಮುದಾಯದ ಕೆಲ ಹಿರಿಯ ಮುಖಂಡರ ಅಭಿಪ್ರಾಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT