ಡಿ.ಕೆ ಶಿವಕುಮಾರ್ 
ರಾಜಕೀಯ

ನಾನು ಯಾವುದೇ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ: ಡಿಸಿಎಂ ಡಿಕೆಶಿ

ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಪಕ್ಷದ ಕೆಲಸವನ್ನು ಮಾತ್ರ ಮಾಡಿದ್ದೇನೆ. ಅದಕ್ಕಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಪಕ್ಷದ ಕೆಲಸವನ್ನು ಮಾತ್ರ ಮಾಡಿದ್ದೇನೆ. ಅದಕ್ಕಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.

ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ, "ನನಗೇನೂ ಗೊತ್ತಿಲ್ಲ.... ಕೋರ್ಟ್‌ನಲ್ಲಿ ಏನಾಗಿದೆ ಎಂದು ನನಗೆ ಇನ್ನೂ ತಿಳಿದಿಲ್ಲ. ಗೊತ್ತಿಲ್ಲದೆ ಆ ಬಗ್ಗೆ ಕಾಮೆಂಟ್ ಮಾಡುವುದು ಸರಿಯಲ್ಲ. ನನ್ನ ವಕೀಲರು ನನಗೆ ತಿಳಿಸಬೇಕು. ಇಲ್ಲದೆ ಇದು ನ್ಯಾಯಾಲಯದ ವಿಷಯವಾಗಿರುವುದರಿಂದ ನಾನು ಪ್ರತಿಕ್ರಿಯಿಸಲಾರೆ ಮತ್ತು ನನ್ನ ಪ್ರಕಾರ ನ್ಯಾಯಾಲಯದ ವಿಷಯದಿಂದ ದೂರವಿರುವುದು ಒಳ್ಳೆಯದು” ಎಂದು ಹೇಳಿದ್ದಾರೆ.

ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಯಾರಾದರೂ ಏನು ಬೇಕಾದರೂ ಮಾಡಲಿ... ಯಾರು ಏನು ಹೇಳಿದ್ದಾರೆ, ಏನು ಕಾಮೆಂಟ್ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ನಾನು ಅವರಿಗೆ ಸರಿಯಾದ ಸಮಯದಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. "ನಾನು ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ, ಪಕ್ಷದ ಕೆಲಸಕ್ಕಾಗಿ ನಾನು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ. ನನ್ನ ಜೊತೆ ದೇವರು ಇದ್ದಾನೆ ಮತ್ತು ರಾಜ್ಯದ ಜನ ಸಹ ಇದ್ದಾರೆ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಡಿಕೆ ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿತ್ತು. ನಂತರ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಯಿತು ಮತ್ತು ಅಕ್ರಮ ಆಸ್ತಿಗಳ ಆರೋಪದ ಮೇಲೆ ತನಿಖೆಯನ್ನು ಕೈಗೊಳ್ಳಲಾಯಿತು.

ಆದರೆ ಕಳೆದ ನವೆಂಬರ್ 23 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧದ ಡಿಎ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT