ಸಚಿವ ಕೃಷ್ಣ ಬೈರೇಗೌಡ 
ರಾಜಕೀಯ

ಬಿಆರ್ ಪಾಟೀಲ್ ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಸಚಿವ ಕೃಷ್ಣ ಬೈರೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದು, ಅದರ ಬಗ್ಗೆ ಅವರೇ ನಿರ್ಣಯ ಕೈಗೊಳ್ಳುತ್ತಾರೆಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದು, ಅದರ ಬಗ್ಗೆ ಅವರೇ ನಿರ್ಣಯ ಕೈಗೊಳ್ಳುತ್ತಾರೆಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದನದಲ್ಲಿ ಏನು ಹೇಳಿದ್ದೇನೆ ಎಂಬುದರ ಬಗ್ಗೆ ಮಾಹಿತಿ ಇದೆ. ನಿಮಗೆ ಕೊಡುತ್ತೇನೆ. ಅದನ್ನು ನೀವೂ ನೋಡಿ. ನಂತರ ನೀವೇ ನಿರ್ಧರಿಸಿ ಎಂದು ಹೇಳಿದರು.

ಬಿಆರ್. ಪಾಟೀಲ್ ಅವರ ಹೇಳಿಕೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನನ್ನನ್ನು ಸಿಎಂ ಸಂಪರ್ಕಿಸಿಲ್ಲ. ಬಿಆರ್ ಪಾಟೀಲ್ ಪತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೇ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

ತನಿಖೆ ಮಾಡಿ ಎಂಬ ಬಿಆರ್ ಪಾಟೀಲ್ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ಇಲಾಖೆ ನನಗೆ ಸಂಬಂಧಿಸಿದ್ದಲ್ಲ. ನಾನು ನನ್ನ  ಇಲಾಖೆ ಬಗ್ಗೆ ಮಾತ್ರ ಉತ್ತರ ನೀಡಿದ್ದೇನೆ. ತನಿಖೆ ಮಾಡುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!