ರಾಜಕೀಯ

CM Siddaramaiah ಸಂಧಾನ ಯಶಸ್ವಿ: ಅಧಿವೇಶನಕ್ಕೆ ಹೋಗುತ್ತೇನೆ ಎಂದ ಶಾಸಕ ಬಿಆರ್ ಪಾಟೀಲ್

Manjula VN

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಆಳಂದ ಶಾಸಕ ಬಿಆರ್‌ ಪಾಟೀಲ್‌ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದು, ಸಿಟ್ಟನ್ನು ಶಮನ ಮಾಡಿದ್ದಾರೆ.

ರೇಸ್ ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ಬಿಆರ್‌ ಪಾಟೀಲ್‌ ಜೊತೆ ಮುಖ್ಯಮಂತ್ರಿಗಳು ಬುಧವಾರ ಸಂಜೆ ಸಭೆ ನಡೆಸಿ, ಮಾತುಕತೆ ನಡೆಸಿದ್ದರು. ಈ ಮಾತುಕತೆಯ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್ ಹಾಗು ನಜೀರ್ ಅಹ್ಮದ್ ಅವರು ಸಾಥ್ ನೀಡಿದ್ದರು.

ಸಭೆಯ ಬಳಿಕ ಮಾತನಾಡಿದ ಬಿಆರ್‌ ಪಾಟೀಲ್‌ ಅವರು, ಮುಖ್ಯಮಂತ್ರಿಗಳು ಕರೆ ಮಾಡಿ ಬರಲು ಹೇಳಿದ್ದರು. ಮುಕ್ಕಾಲು ಗಂಟೆ ಮಾತನಾಡಿ ಎಲ್ಲಾ ಸಮಸ್ಯೆ ಬಗೆಹರಿಸಿದ್ದಾರೆ. ಇನ್ನು ಮುಂದೆ ಯಾವುದೇ ಸಮಸ್ಯೆ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು.

ಅನುದಾನ ವಿಚಾರವಾಗಿ ನನಗೆ ಅಸಮಾಧಾನ ಇಲ್ಲ. ಗ್ಯಾರಂಟಿ ಯೋಜನೆಗಳು ಕೊಟ್ಟ ಕಾರಣ ಅನುದಾನ ಸಿಗುತ್ತಿಲ್ಲ ಎನ್ನುವುದು ನನಗೂ ಗೊತ್ತಿದೆ. ಪಂಚ ರಾಜ್ಯಗಳ ಚುನಾವಣೆ ಇದ್ದ ಕಾರಣ ಸುಮ್ಮನಿದ್ದೆ. ಈಗ ಈ ವಿಚಾರ ಎತ್ತಿದ್ದೇನೆ ಎಂದು ತಿಳಿಸಿದರು.

ಕೃಷ್ಣಬೈರೇಗೌಡ ಅವರು ನನಗೆ ಒಬ್ಬರಿಗಷ್ಟೇ ಅಲ್ಲ, ಎಲ್ಲಾ ಶಾಸಕರಿಗೆ ಸವಾಲು ಹಾಕಿದ್ದಾರೆ. ಪ್ರಿಯಾಂಕ್ ಖರ್ಗೆ ಜೊತೆ ಯಾವುದೇ ಮನಸ್ತಾಪ ಇಲ್ಲ. ತಂದೆಗೆ ಕೊಟ್ಟ ಗೌರವ ಪ್ರಿಯಾಂಕ್ ನನಗೆ ಕೊಡುತ್ತಾರೆ. ಕೃಷ್ಣ ಬೈರೇಗೌಡ ಜೊತೆಗೂ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

SCROLL FOR NEXT