ರಾಜಕೀಯ

ಬಿಜೆಪಿ ಜೊತೆ ದೋಸ್ತಿಗೆ ಅಸಮಾಧಾನ: ಜೆಡಿಎಸ್ ಮಹತ್ವದ ಸಭೆ, ಕುಮಾರಸ್ವಾಮಿ ಹೇಳಿದಿಷ್ಟು...

Nagaraja AB

ರಾಮನಗರ: ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ನಲ್ಲೇ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಭಾನುವಾರ ಜೆಡಿಎಸ್ ಪಕ್ಷದ ಮಹತ್ವದ ಸಭೆ ನಡೆಯಿತು. ಬಿಡದಿ ಬಳಿ ಇರುವ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಶಾಸಕರು, ಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಪಾಲ್ಗೊಂಡರು.

ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ವಿಚಾರದಲ್ಲಿ ಯಾವುದೇ ಸಮಸ್ಯೆಯಾಗಲ್ಲ,ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನೂ ಮುಸ್ಲಿಮರ ಕುರಿತ ಕಾಂಗ್ರೆಸ್ ನವರು ಅಪ ಪ್ರಚಾರ ಮಾಡುತ್ತಿದ್ದಾರೆ.  ಮತಕ್ಕಾಗಿ ಒಂದು ಸಮುದಾಯವನ್ನು ಓಲೈಸುವ ಅಗತ್ಯವಿಲ್ಲ. ಅವರ ಬಗ್ಗೆ ನನಗಿರುವ ಬದ್ಧತೆ ಕುರಿತು ಆ ಸಮುದಾಯದ ಬಂಧುಗಳಿಗೆ ಗೊತ್ತಿದೆ. ಕಳೆದ ಬಾರಿ ಮುಸ್ಲಿಮರಿಗೆ ಸಮಸ್ಯೆಯಾದಾಗ ಅವರ ಪರ ಧ್ವನಿ ಎತ್ತಿದ್ದು, ನಾನು ಹಾಗಾಗಿ ಸಮುದಾಯದವರು ಯಾವುದೇ ಅಪಪ್ರಚಾರಕ್ಕೆ ಕಿವಿಗೂಡಬಾರದು ಎಂದರು. 

ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಟಿ. ದೇವೇಗೌಡ, ಬಿಜೆಪಿ- ಜೆಡಿಎಸ್ ಮೈತ್ರಿ ಕುರಿತು ದೇವೇಗೌಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು.

SCROLL FOR NEXT