ಬಿಜೆಪಿ ಟ್ವೀಟ್ 
ರಾಜಕೀಯ

ಹಿಂದೂಗಳ ಮನೆಗೆ ಕಲ್ಲೆಸೆಯುವುದು, ಬೆಂಕಿ ಹಚ್ಚುವುದು, ಹಲ್ಲೆ ನಡೆಸಿರುವುದು ಗೃಹ ಸಚಿವರಿಗೆ ಸಣ್ಣ ವಿಷಯವಂತೆ: ಬಿಜೆಪಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣವನ್ನು ಸಣ್ಣ ಘಟನೆಯೆಂದು ಗೃಹ ಸಚಿವ ಪರಮೇಶ್ವರ್ ಅವರು ಪುನರುಚ್ಛರಿಸಿದ್ದು, ಹೇಳಿಕೆಗೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣವನ್ನು ಸಣ್ಣ ಘಟನೆಯೆಂದು ಗೃಹ ಸಚಿವ ಪರಮೇಶ್ವರ್ ಅವರು ಪುನರುಚ್ಛರಿಸಿದ್ದು, ಹೇಳಿಕೆಗೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಹಿಂದೂಗಳ ಮನೆಗೆ ಕಲ್ಲೆಸೆಯುವುದು, ಹಿಂದೂಗಳ ಮನೆಗೆ ಬೆಂಕಿ ಹಚ್ಚುವುದು, ಹಿಂದೂಗಳ ಮೇಲೆ ಮನಬಂದಂತೆ ಜಿಹಾದಿಗಳು ಹಲ್ಲೆ ಮಾಡುವುದು, ಗೃಹ ಸಚಿವರಿಗೆ ಸಣ್ಣ ವಿಷಯವಂತೆ ಎಂದು ವ್ಯಂಗ್ಯವಾಡಿದೆ.

ಮತ್ತೊಂದು ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, ಬಂದಿದ್ದು, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಕರ್ನಾಟಕ ಸ್ವರ್ಗವಾಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದೆ.

ಉಡುಪಿಯಲ್ಲಿ ಹಿಂದೂ ಯುವತಿಯರ ಖಾಸಗಿ ವಿಡಿಯೋಗಳ ರಹಸ್ಯ ಚಿತ್ರೀಕರಣ, ರಾಮನಗರದಲ್ಲಿ  ಹಾಡುಹಗಲೇ ಗೋವುಗಳ ಕಳ್ಳತನ ಹಾಗೂ ವಧೆ, ರಾಮನಗರದ ಟಿಪ್ಪು ನಗರಕ್ಕೆ ಕರೆಂಟ್‌ ಬಿಲ್ ಕೊಡಲು ಹೋದ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಗುಂಪು ಹಲ್ಲೆ, ಭದ್ರಾವತಿಯಲ್ಲಿ ಹಿಂದೂ ಯುವಕನ ಮೇಲೆ, ಜಿಹಾದಿ ಸಂಘಟನೆಗಳಿಂದ ಮಾರಣಾಂತಿಕ ಹಲ್ಲೆ, ಹಾಸನದಲ್ಲಿ ಹಾಡುಹಗಲೇ ಗನ್‌ ಹಿಡಿದು, ಜಿಹಾದಿ ಯುವಕರಿಂದ ಪುಂಡಾಟ, ಚಿಕ್ಕಬಳ್ಳಾಪುರದಲ್ಲಿ ಹಿಂದೂ ಯುವಕನ ಮೇಲೆ ಜಿಹಾದಿಗಳ ನೈತಿಕ ಪೊಲೀಸ್‌ ಗಿರಿ, ಶಿವಮೊಗ್ಗದಲ್ಲಿ ಹಿಂದೂಗಳ ಮನೆ, ವಾಹನಗಳ ಮೇಲೆ ಕಲ್ಲೆಸೆತ - ತಲ್ವಾರ್‌ನಿಂದ ಕೊಲೆ ಯತ್ನ ಎಂದು ರಾಜ್ಯದಲ್ಲಿ ನಡೆದ ಘಟನೆಗಳನ್ನು ಪಟ್ಟಿ ಮಾಡಿದೆ.

ತಾವೆಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲಕ್ಕಿರಲಿದೆ ಎಂಬ ಕಾರಣಕ್ಕೆ ಜಿಹಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಕರ್ನಾಟಕವನ್ನು ಮತ್ತೊಂದು ತಾಲಿಬಾನ್‌ ಮಾಡಲು ಕಾಂಗ್ರೆಸ್‌ “ಸಿದ್ದ”ವಾಗಿ ನಿಂತಂತೆ ಕಾಣುತ್ತಿದೆ.

ರಾಜ್ಯದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರವೋ..? ತಾಲಿಬಾನ್‌ ಸರ್ಕಾರವೋ..? ಪೊಲೀಸರ ಮೇಲೆ ಕಲ್ಲು ತೂರಿ, ಸರ್ಕಾರಿ ವಾಹನಗಳಿಗೆ ಬೆಂಕಿ ಇಟ್ಟು ಕೋಮುಗಲಭೆ ನಡೆಸಿದ ತನ್ನ ಜಿಹಾದಿ ಬ್ರದರ್ಸ್‌ಗಳನ್ನು ಬಿಡುಗಡೆ ಮಾಡುವಂತೆ ಖುದ್ದು ಡಿಸಿಎಂ ಡಿಕೆ.ಶಿವಕುಮಾರ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರಿಗೆ ಅಮಾಯಕರೆಂದು ತನ್ವೀರ್‌ ಸೇಠ್‌ ಸರ್ಟಿಫಿಕೇಟ್‌ ಕೊಟ್ಟಿದ್ದರು.

ಉಗ್ರಗಾಮಿಗಳ ಬಂಧನವಾಗುತ್ತಿದ್ದಂತೆ ಕ್ಲೀನ್‌ ಚಿಟ್‌ ಕೊಡಲು ಉತ್ಸುಕರಾಗಿರುವ ಗೃಹ ಸಚಿವ ಪರಮೇಶ್ವರ್ ಅವರಿರುವಾಗ ದಂಗೆಕೋರರನ್ನು ಬಿಟ್ಟು ಕಳಿಸುವುದು ಕಾಂಗ್ರೆಸ್‌ಗೆ ತುಂಬಾ ಸಲೀಸು. ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಪಿಎಫ್‌ಐ ಗೂಂಡಾಗಳನ್ನು ಬಿಡುಗಡೆ ಮಾಡಿದ ಪರಿಣಾಮವೇ ಇಂದು ಶಿವಮೊಗ್ಗ ಕೋಮುಗಲಭೆಯಿಂದ ಹೊತ್ತಿ ಉರಿಯುತ್ತಿದೆ. ಸಿದ್ದರಾಮಯ್ಯ ಅವರ ಸರ್ಕಾರ ತುಷ್ಟೀಕರಣಕ್ಕಾಗಿ ಜಿಹಾದಿಗಳ ಮೇಲಿನ ಪ್ರಕರಣ ಕೈಬಿಡುತ್ತಿರುವುದರಿಂದ ಕರ್ನಾಟಕದಲ್ಲಿ ಇಂದು ಐಸಿಸ್‌ ಕ್ಯಾಂಪ್‌ಗಳು ಸಕ್ರಿಯವಾಗುತ್ತಿವೆ ಎಂದು ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT