ರಾಜಕೀಯ

ಕಿತ್ತೂರು ಕರ್ನಾಟಕದ ಕಡೆ ಜೆಡಿಎಸ್‌ ನಡೆ: ಅಕ್ಟೋಬರ್ 11 ರಿಂದ ಮೂರು ದಿನಗಳ ಸಭೆ

Shilpa D

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಅಕ್ಟೋಬರ್ 11 ರಿಂದ ಮೂರು ದಿನಗಳ ಕಾರ್ಯಕ್ರಮ ನಡೆಸುವುದಾಗಿ ಜೆಡಿಎಸ್  ನಾಯಕರು ತಿಳಿಸಿದ್ದಾರೆ. ಇತ್ತೀಚೆಗೆ ರಚಿಸಲಾದ ಕೋರ್ ಕಮಿಟಿಯು ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದೆ.

ಬೆಂಗಳೂರಿನಲ್ಲಿ  ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ನಾಯಕ ವೈಎಸ್ ವಿ ದತ್ತ, ಸಂಸತ್ ಚುನಾವಣೆಗೆ ಬಿಜೆಪಿಯೊಂದಿಗೆ ಪಕ್ಷ ಮೈತ್ರಿ ಮಾಡಿಕೊಂಡ ನಂತರ ಚಾಮುಂಡೇಶ್ವರಿ ಶಾಸಕ ಜಿ ಟಿ ದೇವೇಗೌಡ ನೇತೃತ್ವದಲ್ಲಿ 21 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ (ಹಿಂದಿನ ಹೈದರಾಬಾದ್-ಕರ್ನಾಟಕ ಪ್ರದೇಶ) ಕ್ಕೆ ಪ್ರಯಾಣಿಸಲಿದೆ ಎಂದು ಕೋರ್ ಕಮಿಟಿ ತಿಳಿಸಿದೆ.

ಬುಧವಾರದಿಂದ ನಾವು ಕಿತ್ತೂರು ಕರ್ನಾಟಕ (ಹಿಂದಿನ ಬಾಂಬೆ-ಕರ್ನಾಟಕ) ಪ್ರದೇಶದಲ್ಲಿ ಸಭೆ ನಡೆಸಲಿದ್ದೇವೆ, ಅಕ್ಟೋಬರ್ 11 ರಂದು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತ ತಿಳಿಸಿದ್ದಾರೆ.

ಅಕ್ಟೋಬರ್ 12 ರಂದು ಹುಬ್ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಕೋರ್ ಕಮಿಟಿ ಸಭೆ ನಡೆಸಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹೊರತುಪಡಿಸಿ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಭಾಗದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದತ್ತ ತಿಳಿಸಿದರು.

ಅಕ್ಟೋಬರ್ 13 ರಂದು ಗಡಿ ಜಿಲ್ಲಾ ಕೇಂದ್ರವಾದ ಬೆಳಗಾವಿಯಲ್ಲಿ ಪಕ್ಷವು ಸಭೆಯನ್ನು ಆಯೋಜಿಸಲಿದ್ದು, ಅಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿಯ ಮುಖಂಡರು ಮತ್ತು ಕಾರ್ಯಕರ್ತರು ಸೇರಲಿದ್ದಾರೆ. ಜೆಡಿಎಸ್ ಶಾಸಕ ದೇವೇಗೌಡ ಅವರು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದು ಗಮನಕ್ಕೆ ಬಂದಿದೆ,  ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಕೃಷಿ ಬಿಕ್ಕಟ್ಟು ಹಲವು ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಿದರು.

SCROLL FOR NEXT